×
Ad

ಕಾರ್ಕಳ ಪುರಸಭೆ ಮತ್ತೊಮ್ಮೆ ಬಿಜೆಪಿ ತೆಕ್ಕೆಗೆ; ಅಧ್ಯಕ್ಷರಾಗಿ ಯೋಗೀಶ್ ದೇವಾಡಿಗ ಉಪಾಧ್ಯಕ್ಷರಾಗಿ ಪ್ರಶಾಂತ್ ಕೋಟ್ಯಾನ್ ಆಯ್ಕೆ

Update: 2024-08-30 14:11 IST

ಕಾರ್ಕಳ : ಕಾರ್ಕಳ ಪುರಸಭೆಯ 2ನೇ ಅವಧಿಗೆ ಅಧ್ಯಕ್ಷರಾಗಿ ಬಿಜೆಪಿಯ ಹಿರಿಯ ಸದಸ್ಯ ,ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಯೋಗೀಶ್ ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಮೊದಲ ಬಾರಿಗೆ ಸದಸ್ಯರಾದ ಪ್ರಶಾಂತ್ ಕೋಟ್ಯಾನ್ ಅವರು ಆಯ್ಕೆಯಾಗುವ ಮೂಲಕ ಮತ್ತೊಮ್ಮೆ ಕಾರ್ಕಳ ಪುರಸಭೆ ಬಿಜೆಪಿ ತೆಕ್ಕೆಗೆ ಬಿದ್ದಿದೆ.

ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಯೋಗೀಶ್ ದೇವಾಡಿಗ 13 ಮತ ಗಳಿಸಿದರೆ ಕಾಂಗ್ರೆಸ್ ಅಭ್ಯರ್ಥಿ ಶುಭದ ರಾವ್11 ಮತ ಗಳಿಸಿದ್ದು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಶಾಂತ್ ಕೋಟ್ಯಾನ್ 13 ಮತ ಗಳಿಸಿದರೆ ಕಾಂಗ್ರೆಸ್ ಅಭ್ಯರ್ಥಿ ವಿನ್ನಿ ಬೋಲ್ಡ್ ಮೆನ್ಡಾನ್ಕಾ 11ಮತ ಗಳಿಸಿದ್ದಾರೆ.

ಕಾರ್ಕಳ ಪುರಸಭೆಯಲ್ಲಿ 23 ಸದಸ್ಯರ ಪೈಕಿ ಕಾಂಗ್ರೆಸ್ ಬಿಜೆಪಿ ತಲಾ 11ಸದಸ್ಯ ಬಲ ಹೊಂದಿದ್ದು ಒಬ್ಬ ಪಕ್ಷೇತರ ಸದಸ್ಯರಿದ್ದಾರೆ. ಶಾಸಕ ವಿ ಸುನಿಲ್ ಕುಮಾರ್ ಹಾಗೂ ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರ ಮತಗಳು ಸೇರಿ ಬಿಜೆಪಿ ಸದಸ್ಯ ಬಲ 13ಕ್ಕೆ ಏರಿತ್ತು. ಪಕ್ಷೇತರ ಅಭ್ಯರ್ಥಿ ಲಕ್ಷ್ಮಿ ನಾರಾಯಣ ಮಲ್ಯ ಗೈರು ಹಾಜರಾಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News