×
Ad

ಉಪ್ಪಿನಂಗಡಿ: ಹೃದಯಾಘಾತದಿಂದ ವಿದ್ಯಾರ್ಥಿ ನಿಧನ

Update: 2023-11-07 13:07 IST

ಉಪ್ಪಿನಂಗಡಿ: ಹೃದಯಾಘಾತಕ್ಕೆ ಒಳಗಾಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.

ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ನಿವಾಸಿ ಯೂಸುಫ್ ಎಂಬವರ ಪುತ್ರ ಮಹಮ್ಮದ್ ಇರ್ಫಾನ್ (18)ಮೃತಪಟ್ಟ ಯುವಕ. ಪುತ್ತೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಎ.ಸಿ. ಮೆಕ್ಯಾನಿಕ್ ವ್ಯಾಸಂಗ ಮಾಡುತ್ತಿದ್ದ ಇರ್ಫಾನ್ ಎಂದಿನಂತೆ ತರಗತಿ ಮುಗಿದು ಸಂಜೆ ಮನೆಗೆ ಬಂದಿದ್ದ.

ಸಾಯಂಕಾಲ 6 ಗಂಟೆಯ ವೇಳೆಗೆ ಇರ್ಫಾನ್ ದಿಢೀರ್ ಅನಾರೋಗ್ಯಕ್ಕೆ ಒಳಗಾಗಿ ಕುಸಿದು ಬಿದ್ದಾಗ ಮನೆಯವರು ತಕ್ಷಣ ನೆಲ್ಯಾಡಿಯ ಆಸ್ಪತ್ರೆಗೆ ಕರೆತಂದರಾದರೂ ಆ ವೇಳೆಗಾಗಲೇ ಆತ ಮೃತಪಟ್ಟಿದ್ದ ಎಂದು ವರದಿಯಾಗಿದೆ. 

ಮೃತ ಯುವಕ ತಂದೆ, ತಾಯಿ, ಮೂವರು ಸಹೋದರರು ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ. 



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News