×
Ad

ಭಟ್ಕಳ| ಬಸ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Update: 2025-10-05 17:36 IST

ಭಟ್ಕಳ: ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ನಡೆದಿದೆ.

ಮೃತರನ್ನು ಪುರವರ್ಗ ಗ್ರಾಮದ ನಿವಾಸಿ ಸುಂದರ ಅಚಾರಿ (50) ಎಂದು ಗುರುತಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ರವಿವಾರ ಬೆಳಿಗ್ಗೆ 10.15ರ ಸುಮಾರಿಗೆ ಸುಂದರ ಅಚಾರಿ ಅವರು ಬೈಕ್‌ನಲ್ಲಿ ಪುರವರ್ಗ ದಿಂದ ಭಟ್ಕಳದತ್ತ ಬರುತ್ತಿದ್ದಾಗ, ಹಿಂದಿನಿಂದ ಬಂದ ಸರ್ಕಾರಿ ಬಸ್ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಮಣಿಪಾಲದಿಂದ ಗೋಕರ್ಣದತ್ತ ತೆರಳುತ್ತಿದ್ದ ಬಸ್ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸುಂದರ ಅಚಾರಿ ರಸ್ತೆಗೆ ಬಿದ್ದಿದ್ದು, ಈ ವೇಳೆ ಬಸ್‌ನ ಚಕ್ರ ತಲೆಯ ಮೇಲೆ ಹಾದುಹೋಗಿದ್ದು, ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ.

ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆಯೇ ಭಟ್ಕಳ ವೃತ್ತದ ಪೊಲೀಸ್ ಇನ್ಸ್‌ಪೆಕ್ಟರ್ ದಿವಾಕರ್ ನೇತೃತ್ವದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು ಮತ್ತು ಅಗತ್ಯ ಕಾನೂನು ಕ್ರಮ ಕೈಗೊಂಡರು.

ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಮೃತದೇಹವನ್ನು ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಮೃತ ಸುಂದರ ಅಚಾರಿಯ ಇಬ್ಬರು ಪುತ್ರರು, ಪತ್ನಿ ಮತ್ತು ಒಬ್ಬ ಮಗಳನ್ನು ಅಗಲಿದ್ದಾರೆ.

ಘಟನೆ ಕುರಿತು ಭಟ್ಕಳ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News