×
Ad

ಭಟ್ಕಳ | ಪ್ರವಾಸಿಗರ ಮೊಬೈಲ್ ಕಳವಿಗೆ ಯತ್ನ: ಇಬ್ಬರು ಆರೋಪಿಗಳ ಬಂಧನ

Update: 2025-10-06 10:16 IST

ಸಾಂದರ್ಭಿಕ ಚಿತ್ರ

ಭಟ್ಕಳ: ಭಟ್ಕಳ ತಾಲೂಕಿನ ಮುಟ್ಟಳ್ಳಿ–ಬಿಲಾಲ್ ಖಂಡ ಗ್ರಾಮದ ಗಾಂಧಿ ಜಲಪಾತದ ಬಳಿ ಪ್ರವಾಸಿಗರ ಮೊಬೈಲ್ ಕಳವು ಮಾಡಲು ಯತ್ನಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಭಟ್ಕಳ ಪೊಲೀಸರು ಬಂಧಿಸಿದ್ದಾರೆ.

ಬಿಲಾಲ್ಖಂಡ್ ನಿವಾಸಿ ಮುಹಮ್ಮದ್ ಅಮೀರ್ ಮತ್ತು ಬದ್ರಿಯಾ ಕಾಲನಿಯ ನಿವಾಸಿ ಅಬ್ದುಲ್ ರಹ್ಮಾನ್ ಬಂಧಿತ ಆರೋಪಿಗಳು.

ಈ ಇಬ್ಬರು ಪ್ರವಾಸಿಗರ ಮೊಬೈಲ್ ಕದಿಯಲು ಯೋಜನೆ ರೂಪಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣವನ್ನು ಭಡ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಪ್ರವಾಸಿಗರು ಎಚ್ಚರ ವಹಿಸುವಂತೆ ಹಾಗೂ ಸಂಶಯಾಸ್ಪದ ವ್ಯಕ್ತಿಗಳನ್ನು ಕಂಡಲ್ಲಿ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News