×
Ad

ಭಟ್ಕಳದಲ್ಲಿ ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ

Update: 2026-06-12 20:35 IST

ಭಟ್ಕಳ: ನಗರ ಪ್ರದೇಶದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ನಿಯಮ ಉಲ್ಲಂಘನೆ ತಡೆಗಟ್ಟುವ ಉದ್ದೇಶದಿಂದ ಆರೋಗ್ಯ ಇಲಾಖೆ ಹಾಗೂ ತಂಬಾಕು ನಿಯಂತ್ರಣ ದಳದ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ 16 ಅಂಗಡಿಗಳನ್ನು ಪರಿಶೀಲಿಸಿದರು.

ನಗರದ ಶಂಸುದ್ದೀನ್ ಸರ್ಕಲ್ ಸೇರಿದಂತೆ ವಿವಿಧ ಪ್ರದೇಶಗಳ ಅಂಗಡಿಗಳಲ್ಲಿ ನಡೆಸಿದ ತಪಾಸಣೆ ವೇಳೆ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸಿರುವುದು ಹಾಗೂ ಅಂಗಡಿಗಳಲ್ಲಿ ತಂಬಾಕು ಸೇವನೆಗೆ ಅವಕಾಶ ಕಲ್ಪಿಸಿರುವುದು ಪತ್ತೆಯಾಯಿತು. ಈ ಹಿನ್ನೆಲೆಯಲ್ಲಿ ಸಂಬಂಧಿತ ಅಂಗಡಿಗಳ ವಿರುದ್ಧ ಕ್ರಮ ಕೈಗೊಂಡು ಒಟ್ಟು 2,600 ದಂಡ ವಿಧಿಸಲಾಯಿತು.

ಕಾರ್ಯಾಚರಣೆಯಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀನಿವಾಸ್ ಆರ್., ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ರಾಮು, ತಾಲೂಕು ವ್ಯವಸ್ಥಾಪಕ ಅನಂತ ಮೊಗೇರ್, ಸಿಡಿಪಿಒ ಸುಶೀಲಾ ಮೊಗೇವೀರ, ಆಹಾರ ನಿರೀಕ್ಷಕ ಉದಯ ತಲವಾರ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ ಶಿರಾಲಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ತಂಬಾಕು ನಿಯಂತ್ರಣ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಇಂತಹ ಕಾರ್ಯಾಚರಣೆಗಳನ್ನು ಮುಂದಿನ ದಿನಗಳಲ್ಲಿಯೂ ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News