×
Ad

ಭಟ್ಕಳ: ಮಜ್ಲಿಸ್ ಇಸ್ಲಾಹ್ ವ ತಂಝೀಮ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ

Update: 2026-06-14 20:22 IST

ಭಟ್ಕಳ: ಭಟ್ಕಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಸ್ಲಿಂ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಮತ್ತು ಸಾರ್ವಜನಿಕ ವಿಚಾರಗಳಿಗೆ ಮಾರ್ಗದರ್ಶನ ನೀಡುತ್ತಿರುವ ಪ್ರತಿಷ್ಠಿತ ಸಂಸ್ಥೆಯಾದ ಮಜ್ಲಿಸ್ ಇಸ್ಲಾಹ್ ವ ತಂಝೀಮ್ ಸಂಸ್ಥೆಗೆ ಇದರ ಮುಂದಿನ ಮೂರು ವರ್ಷದ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಸಂಸ್ಥೆಯ ಕಚೇರಿಯಲ್ಲಿ ರವಿವಾರ ನಡೆದ ಸಭೆಯಲ್ಲಿ ಇನಾಯತುಲ್ಲಾ ಶಾಬಂದ್ರಿ ಅವರನ್ನು ಮತ್ತೊಮ್ಮೆ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಮೌಲಾನಾ ಅಝೀಝುರಹ್ಮಾನ್ ರುಕ್ನುದ್ದೀನ್ ನದ್ವಿ ಆಯ್ಕೆಯಾಗಿದ್ದಾರೆ.

ಇತರ ಪದಾಧಿಕಾರಿಗಳಾಗಿ ಪಿಲ್ಲೂರ್ ಮುಹಮ್ಮದ್ ಸಾಧಿಕ್ ಅವರನ್ನು ಪ್ರಥಮ ಉಪಾಧ್ಯಕ್ಷರಾಗಿ, ಕಮರ್ ಸಾದಾ ಅವರನ್ನು ದ್ವಿತೀಯ ಉಪಾಧ್ಯಕ್ಷರಾಗಿ ಹಾಗೂ ರುಕ್ನುದ್ದೀನ್ ಅಬ್ದುಸ್ಸಲಾಂ ಅವರನ್ನು ತೃತೀಯ ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ಆಡಳಿತ ವಿಭಾಗದ ಕಾರ್ಯದರ್ಶಿಯಾಗಿ ಇಕ್ಬಾಲ್ ಸುಹೈಲ್, ಹಣಕಾಸು ಕಾರ್ಯದರ್ಶಿಯಾಗಿ ಮುಬೀನ್ ದಾಮೂದಿ ಹಾಗೂ ಲೆಕ್ಕಪರಿಶೋಧಕರಾಗಿ ಬಿಲಾಲ್ ಕಮ್ರಿ ಅವರನ್ನು ನೇಮಕ ಮಾಡಲಾಗಿದೆ.

ಶತಮಾನಕ್ಕೂ ಅಧಿಕ ಇತಿಹಾಸ ಹೊಂದಿರುವ ಮಜ್ಲಿಸ್ ಇಸ್ಲಾಹ್ ವ ತಂಝೀಮ್ ಸಂಸ್ಥೆಯು ಭಟ್ಕಳ ಮಾತ್ರವಲ್ಲದೆ ಕರಾವಳಿ ಭಾಗದ ಮುಸ್ಲಿಂ ಸಮುದಾಯದ ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ಮಾರ್ಗದರ್ಶನ ನೀಡುವ ಪ್ರಮುಖ ಸಂಘಟನೆಯಾಗಿ ಗುರುತಿಸಿಕೊಂಡಿದೆ.

ನೂತನ ಪದಾಧಿಕಾರಿಗಳು ಸಮುದಾಯದ ಅಭಿವೃದ್ಧಿ, ಶಿಕ್ಷಣೋನ್ನತಿ ಹಾಗೂ ಜನಸೇವೆಯ ಕ್ಷೇತ್ರಗಳಲ್ಲಿ ಸಮರ್ಪಿತ ಸೇವೆ ಸಲ್ಲಿಸಲಿದ್ದಾರೆ ಎಂಬ ವಿಶ್ವಾಸವನ್ನು ಸದಸ್ಯರು ವ್ಯಕ್ತಪಡಿಸಿದ್ದಾರೆ.




 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News