×
Ad

ಉತ್ತರ ಕನ್ನಡ ಜಿಲ್ಲಾ ಪ್ರವಾಸಕ್ಕೆ ಆಗಮಿಸಿದ ಸಚಿವ ಯು.ಟಿ. ಖಾದರ್‌

ಭಟ್ಕಳದಲ್ಲಿ ತಂಝೀಮ್‌ನಿಂದ ಸ್ವಾಗತ

Update: 2026-07-04 19:51 IST

ಭಟ್ಕಳ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಯು.ಟಿ. ಖಾದರ್ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡ ಸಂದರ್ಭದಲ್ಲಿ, ಭಟ್ಕಳದ ಗಡಿಭಾಗವಾದ ಶಿರೂರು ಟೋಲ್‌ಗೇಟ್‌ನಲ್ಲಿ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ವತಿಯಿಂದ ಆತ್ಮೀಯ ಸ್ವಾಗತ ಕೋರಲಾಯಿತು.

ಮಂಗಳೂರಿನಿಂದ ಕಾರವಾರದತ್ತ ಪ್ರಯಾಣಿಸುತ್ತಿದ್ದ ಸಚಿವರನ್ನು ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಹಾಗೂ ಪ್ರಧಾನ ಕಾರ್ಯದರ್ಶಿ ಅಝೀಝುರ್ ರಹ್ಮಾನ್ ನದ್ವಿ ರುಕ್ನುದ್ದೀನ್ ಆತ್ಮೀಯವಾಗಿ ಬರಮಾಡಿಕೊಂಡು ಶಾಲು ಹೊದಿಸಿ, ಹೂಗುಚ್ಛ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಭಟ್ಕಳ ಯುವ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ ಇಮ್ಶಾದ್ ಸೇರಿದಂತೆ ತಂಝೀಮ್‌ನ ಪದಾಧಿಕಾರಿ ಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಸಚಿವರಿಗೆ ಶುಭಾಶಯ ಕೋರಿದರು.

ರಾಜ್ಯ ಸರ್ಕಾರದ ಅಧಿಕೃತ ಜಿಲ್ಲಾ ಪ್ರವಾಸದ ಅಂಗವಾಗಿ ಸಚಿವ ಯು.ಟಿ. ಖಾದರ್ ಅವರು ಉತ್ತರ ಕನ್ನಡ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ, ಸಭೆಗಳು ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಮಿಸಿದ್ದರು.



Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News