ಭಟ್ಕಳ: ಕೆಲಸಕ್ಕೆ ತೆರಳುವುದಾಗಿ ಮನೆಯಿಂದ ಹೊರಟ 38 ವರ್ಷದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ಭಟ್ಕಳ ತಾಲ್ಲೂಕಿನ ಶಿರಾಳಿ ಗ್ರಾಮದಲ್ಲಿ ನಡೆದಿದೆ.

ನಾಪತ್ತೆಯಾದವರನ್ನು ಭಟ್ಕಳದ ಬಂದರ್ ರಸ್ತೆಯ ಕೊಕ್ತಿಯ ನಿವಾಸಿ ಅಪ್ಪಾಜಿ ಗಣಪತಿ ಗಣಾಚಾರಿ ಎಂದು ಗುರುತಿಸಲಾಗಿದೆ.

ಜುಲೈ 20ರಂದು ಬೆಳಿಗ್ಗೆ ಸುಮಾರು 8.30ಕ್ಕೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಶಿರಾಲಿ ಯಲ್ಲಿರುವ ಬಾಡಿಗೆ ಮನೆಯಿಂದ ಹೊರಟಿದ್ದ ಅವರು ಬಳಿಕ ಮನೆಗೆ ಮರಳಿಲ್ಲ. ಸಂಬಂಧಿಕರು ಹಾಗೂ ಪರಿಚಯಸ್ಥರ ಮನೆಗಳಲ್ಲಿ ವಿಚಾರಿಸಿದರೂ ಯಾವುದೇ ಮಾಹಿತಿ ಲಭ್ಯವಾಗದ ಹಿನ್ನೆಲೆಯಲ್ಲಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿದೆ.

ಅಪ್ಪಾಜಿ ಗಣಾಚಾರಿ ಅವರ ಕುರಿತು ಯಾವುದೇ ಮಾಹಿತಿ ದೊರೆತಲ್ಲಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ 08385-227333 ಅಥವಾ 9480805252 ಸಂಖ್ಯೆಗೆ ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor