ಭಟ್ಕಳ: ಮುರುಡೇಶ್ವರ ಕಡಲತೀರದಲ್ಲಿ ರವಿವಾರ ಮಧ್ಯಾಹ್ನ ಸಮುದ್ರದಲ್ಲಿ ಮುಳುಗುತ್ತಿದ್ದ ಬೆಂಗಳೂರಿನ ಪ್ರವಾಸಿಗನನ್ನು ಕಡಲತೀರದ ರಕ್ಷಣಾ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.

ಬೆಂಗಳೂರಿನ ಮೂವರು ಸ್ನೇಹಿತರು ಪ್ರವಾಸಕ್ಕಾಗಿ ಮುರುಡೇಶ್ವರಕ್ಕೆ ಬಂದಿದ್ದು, ಸಮುದ್ರದಲ್ಲಿ ಈಜಲು ಇಳಿದಿದ್ದರು. ಈ ವೇಳೆ ಅವರಲ್ಲಿ ಒಬ್ಬರು ಅಲೆಗಳ ನಡುವೆ ಸಿಲುಕಿ ಮುಳುಗತೊಡಗಿದರು. ಅವರನ್ನು ಬೆಂಗಳೂರಿನ ಲಕ್ಮಣ ಸಾಬಣ್ಣ ಎಂದು ಗುರುತಿಸಲಾಗಿದೆ.

ಪ್ರವಾಸಿಗ ಮುಳುಗುತ್ತಿರುವುದನ್ನು ಗಮನಿಸಿದ ಕಡಲತೀರದಲ್ಲಿದ್ದ ರಕ್ಷಣಾ ಸಿಬ್ಬಂದಿ ತಕ್ಷಣ ಧಾವಿಸಿ ಕಾರ್ಯಾಚರಣೆ ನಡೆಸಿ ಅವರನ್ನು ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ. ಇದರಿಂದ ಸಂಭವಿಸಬಹುದಾಗಿದ್ದ ಅವಘಡವೊಂದು ತಪ್ಪಿದಂತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor