×
Ad

ಭಟ್ಕಳ: ಜೂ.29ರಿಂದ ಶ್ರೀ ದುಗಾಪರಮೇಶ್ವರಿ ಪುನರ್ ಪ್ರತಿಷ್ಠಾ ಸುವರ್ಣ ಮಹೋತ್ಸವ

Update: 2024-06-28 22:36 IST

ಭಟ್ಕಳ: ದೇವಿ ಶಕ್ತಿಪೀಠವಾದ ಶ್ರೀ ದುಗಾಪರಮೇಶ್ವರಿ ದೇವಸ್ಥಾನದ ಶ್ರೀ ದೇವರ ಪುನರ್ ಪ್ರತಿಷ್ಠಾ ಸುವರ್ಣ ಮಹೋತ್ಸವ ಜೂ.29ರಿಂದ  ಜುಲೈ9ರ ತನಕ ಜರುಗಲಿದೆ.

ಈ ಸಂದರ್ಭ  ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಶ್ರೀಮದ್ ವಿದ್ಯಾಧೀಶ ತೀರ್ಥ ವಡೇರ ಸ್ವಾಮೀಜಿ ಉಪಸ್ಥಿತಿಯಲ್ಲಿ ನೂತನ ಯಜ್ಞ ಮಂಟಪ ಉದ್ಘಾಟನೆ, ಗೋಪುರಕ್ಕೆ ತಾಮ್ರದ ಹೊದಿಕೆ, ಶಿಖರ ಕಲಶ ಪ್ರತಿಷ್ಟೆ, ಶ್ರೀ ಶತಚಂಡಿಯಾಗ, ಶ್ರೀ ಸೂಕ್ತ ಹವನ, ಶ್ರೀ ಪಂಚದುರ್ಗಾ ಹವನ, ಶ್ರೀ ಲಕ್ಷ ಕುಂಕುಮಾರ್ಚನೆ, ಶ್ರೀ ದುರ್ಗಾ ನಮಸ್ಕಾರ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News