×
Ad

ಭಟ್ಕಳ: ಎಐಟಿಎಂನಲ್ಲಿ 43ನೇ ಪದವಿ ಪ್ರದಾನ, 46ನೇ ವಾರ್ಷಿಕೋತ್ಸವ

Update: 2026-06-29 20:20 IST

ಭಟ್ಕಳ: ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ (ಎಐಟಿಎಂ)ನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಭಾನುವಾರ ವಿಜೃಂಭಣೆಯಿಂದ ನಡೆಯಿತು.

ಕಾಲೇಜಿನ ಪ್ರಾಂಶುಪಾಲ ಡಾ. ಕೆ. ಫಜ್ಲುರ್ ರಹಮಾನ್ ಸ್ವಾಗತಿಸಿ ವಾರ್ಷಿಕ ವರದಿ ಮಂಡಿಸಿದರು. ಚಿನಾರ್ ಕ್ವಾಂಟಮ್ ಎಐ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಾಹಿದ್ ಅಬ್ಬಾಸ್ ಮಿರ್ ಅವರು ಮುಖ್ಯ ಅತಿಥಿ ಯಾಗಿ ಮಾತನಾಡಿ, ತಂತ್ರಜ್ಞಾನ, ನವೋದ್ಯಮ ಹಾಗೂ ಉದ್ಯಮ ಸನ್ನದ್ಧತೆಯ ಮಹತ್ವವನ್ನು ವಿವರಿಸಿದರು. ಗೌರವ ಅತಿಥಿ ಗೋಕುಲ್ ಬಿ. ಅಲೆಕ್ಸ್ ಅವರು ವಿದ್ಯಾರ್ಥಿಗಳಿಗೆ ನಿರಂತರ ಕಲಿಕೆ ಮತ್ತು ಉದ್ಯಮಶೀಲತೆಯ ಮನೋಭಾವ ಬೆಳೆಸಿಕೊಳ್ಳುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಎಐಟಿಎಂ ಹಾಗೂ ಚಿನಾರ್ ಕ್ವಾಂಟಮ್ ಎಐ ಸಂಸ್ಥೆಗಳ ನಡುವೆ ತಿಳುವಳಿಕಾ ಒಪ್ಪಂದ (ಎಂಒಯು)ಕ್ಕೆ ಸಹಿ ಹಾಕಲಾಯಿತು. ಶೈಕ್ಷಣಿಕ, ನವೋದ್ಯಮ ಹಾಗೂ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಅಂಜುಮನ್ ಹಾಮಿ-ಎ-ಮುಸ್ಲಿಮೀನ್‌ನ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಇಸ್ಹಾಕ್ ಶಾಬಂದ್ರಿ, ಎಐಟಿಎಂ ಆಡಳಿತ ಮಂಡಳಿಯ ಕಾರ್ಯದರ್ಶಿ ಮೊಹಮ್ಮದ್ ಅನ್ಸಾರ್ ದಮ್ದಾ ಅಬು ಹಾಗೂ ಉಪಾಧ್ಯಕ್ಷ ಮೊಹಮ್ಮದ್ ಸಾದಿಕ್ ಪಿಲ್ಲೂರ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಡಾ. ಕೆ. ಫಜ್ಲುರ್ ರಹಮಾನ್ ಅವರು ಪದವಿ ಪ್ರಮಾಣ ವಚನ ಬೋಧಿಸಿದ ಬಳಿಕ ಇಂಜಿನಿಯರಿಂಗ್, ಎಂ.ಬಿ.ಎ. ಹಾಗೂ ಎಂ.ಸಿ.ಎ. ವಿಭಾಗಗಳ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ಡಾ. ಜುಬೈರ್ ಕೋಲಾ, ಮೊಹಮ್ಮದ್ ಇಸ್ಮಾಯಿಲ್ ಜುಕಾಕು, ಆಡಳಿತ ಮಂಡಳಿಯ ಸದಸ್ಯರು, ವಿಭಾಗಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಡಾ. ಕಿರಣ್ ವಿ. ಶಾನಭಾಗ್ ವಂದಿಸಿದರು.

ಪ್ರೊ. ಶ್ರೀಶೈಲ ಭಟ್, ಮೊಹಮ್ಮದ್ ಇಯಾದ್ ಹಾಗೂ ಮೊಹಮ್ಮದ್ ಜೈದ್ ನಿರೂಪಿಸಿದರು. 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News