×
Ad

ಸಿಎಂ ನಿಂದನೆ ಆರೋಪ : ಸಂಸದ ಅನಂತಕುಮಾರ್‌ ಹೆಗಡೆ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲು

Update: 2024-02-25 12:55 IST

ಅನಂತಕುಮಾರ್‌ ಹೆಗಡೆ

ಕಾರವಾರ: ಸಿಎಂ ಸಿದ್ದರಾಮಯ್ಯ ಅವರನ್ನು ಏಕವಚನದಿಂದ ಅವಮಾನಕರವಾಗಿ ಮಾತನಾಡಿದ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಬಗ್ಗೆ ವರದಿಯಾಗಿದೆ.

ಮುಂಡಗೋಡದ ಪಾಳಾದಲ್ಲಿ ಶುಕ್ರವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಅನಂತಕುಮಾರ ಹೆಗಡೆ, ಸಿದ್ದರಾಮಯ್ಯ ಅವರನ್ನು ʼಸಿದ್ರಾಮುಲ್ಲಾ ಖಾನ್ʼ ಎಂದು ನಿಂದಿಸಿದ್ದರು. ಅಲ್ಲದೆ ದಿಲ್ಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಖಾಲಿಸ್ತಾನಿಗಳು ಎಂದು ಟೀಕಿಸಿದ್ದರು. ಧಾರ್ಮಿಕ, ಸಾಮಾಜಿಕವಾಗಿ ಅಪಮಾನಕರ ರೀತಿಯಲ್ಲ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಸಂಸದರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಮಾಹಿತಿ ನೀಡಿದ್ದಾರೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News