ಅಂಕೋಲಾ: ಮನೆ ಕೆಲಸ ಮಾಡುತ್ತಿದ್ದ ವ್ಯಕ್ತಿ ಸಿಡಿಲು ಬಡಿದು ಮೃತ್ಯು
Update: 2025-05-20 13:46 IST
ಅಂಕೋಲಾ: ಮನೆ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಸಿಡಿಲು ಬಡಿದು ಮೃತಪಟ್ಟ ಘಟನೆ ಅಂಕೋಲಾ ತಾಲೂಕಿನ ಉಳುವರೆ ಗ್ರಾಮದಲ್ಲಿ ಸಂಭವಿಸಿದೆ.
ತಮ್ಮಾಣಿ ಅನಂತ ಗೌಡ (65)ಮೃತಪಟ್ಟವರು. ತಮ್ಮ ಮನೆಯ ಮೇಲ್ಛಾವಣಿ ರಿಪೇರಿ ಮಾಡುತ್ತಿದ್ದ ಈ ವೇಳೆ ಸಿಡಿಲು ಬಡಿದ ಪರಿಣಾಮ ಇವರನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ತಮ್ಮಾಣಿ ಗೌಡ ಅವರು ಶಿರೂರು ಗುಡ್ಡ ಕುಸಿತದ ಸಂದರ್ಭದಲ್ಲಿ ಗಂಗಾವಳಿ ನದಿ ನೀರು ಮನೆಗೆ ಅಪ್ಪಳಿಸಿತ್ತು. ಈ ವೇಳೆ ಬಹಿರ್ದೆಸೆಗೆ ತೆರಳಿದ್ದ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು.