ಕಾಲೇಜಿನ ಶ್ರೀಮತಿ ವಿದ್ಯಾ ರಮೇಶ್ ಶಾನಭಾಗ ಸಭಾಂಗಣದಲ್ಲಿ ಇತ್ತೀಚೆಗೆ ನೆರವೇರಿತು.

ಭಟ್ಕಳದ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ನಾಗೇಶ್ ಶೆಟ್ಟಿಯವರು ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾಲೇಜಿನ ಪೂರ್ವ ವಿದ್ಯಾರ್ಥಿ ಹಾಗೂ ಸಾಗರದ ಮೌಲಾನಾ ಆಜಾದ್ ಮಾದರಿ ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯರಾದ ಭಾಸ್ಕರ್ ಹೆಬ್ಬಾರ್ ಅವರು ಪ್ರಶಿಕ್ಷಣಾರ್ಥಿ (Trainee)ಗಳನ್ನು ಉದ್ದೇಶಿಸಿ ಮಾತನಾಡಿದರು.

ಭಟ್ಕಳ ಎಜುಕೇಶನ್ ಟ್ರಸ್ಟ್‍ನ ಟ್ರಸ್ಟಿ ಸಮಿತ್ರಾ ಕೌಶೀಕ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಭಟ್ಕಳ ಎಜುಕೇಶನ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ರಾಜೇಶ್ ನಾಯಕ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ದೀಪದಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದಿ ನ್ಯೂ ಇಂಗ್ಲಿಷ್ ಶಾಲೆಯ ಮುಖ್ಯೋಪಾಧ್ಯಾಯರಾದ ಶರತ್ ಗುನಗಿ ಉಪಸ್ಥಿತರಿದ್ದರು.

ದೀಪದಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಭಟ್ಕಳ ಎಜುಕೇಶನ್ ಟ್ರಸ್ಟ್ ನ ಟ್ರಸ್ಟಿ ರಮೇಶ ಖಾರ್ವಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಇದೇ ಸಂದರ್ಭದಲ್ಲಿ ವಿವಿಧ ಪಠ್ಯ, ಪಠ್ಯೇತರ ಚಟುವಟಿಕೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಭಟ್ಟ ಅವರು ಸ್ವಾಗತಿಸಿ, ಪ್ರಸ್ತಾವಿಕ ನುಡಿಗಳನ್ನಾಡಿ ಕಾಲೇಜಿನ ಮುನ್ನೋಟದ ಕುರಿತು ತಿಳಿಸಿದರು. ಉಪನ್ಯಾಸಕ ನಾಗರಾಜ ಮಡಿವಾಳ ವಂದಿಸಿದರು, ಪ್ರಶಿಕ್ಷಣಾರ್ಥಿಗಳಾದ ಲಿಡಿಯಾ, ಸ್ವಾತಿ ಕಾವ್ಯಾ, ಮತ್ತು ಚೈತ್ರಾ ಕಾರ್ಯಕ್ರಮವನ್ನು ನಿರೂಪಿಸಿದರು.

ಸಮಾರಂಭದಲ್ಲಿ ಕಾಲೇಜಿನ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor