ಭಟ್ಕಳ: ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್‌ (AITM)ನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಮೊಹಮದ್ ಫಹಾದ್ ಅವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಪರೀಕ್ಷೆಯಲ್ಲಿ 6ನೇ ರ‍್ಯಾಂಕ್ ಗಳಿಸಿದ್ದಾರೆ. ಅವರು 9.41 ಸಿಜಿಪಿಎ (CGPA) ಪಡೆದಿದ್ದಾರೆ.

ಫಹಾದ್ ಅವರ ಸಾಧನೆಗೆ AITM ಆಡಳಿತ ಮಂಡಳಿ, ಪ್ರಾಂಶುಪಾಲ ಡಾ. ಕೆ. ಫಝ್‌ಲುರ್ರಹಮಾನ್, ರಿಜಿಸ್ಟ್ರಾರ್ ಪ್ರೊ. ಜಾಹಿದ್ ಹಸನ್ ಖರೂರಿ, ವಿಭಾಗದ ಮುಖ್ಯಸ್ಥರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

AITMನ ವಿದ್ಯಾರ್ಥಿಗಳು ಈ ಹಿಂದೆ ಕೂಡ VTU ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. 2013ರಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ನಬೀಲ್ ಮುಸ್ತಫಾ ಅವರು VTUನಲ್ಲಿ ಪ್ರಥಮ ರ‍್ಯಾಂಕ್ ಪಡೆದು 12 ಚಿನ್ನದ ಪದಕಗಳನ್ನು ಗಳಿಸಿದ್ದರು.

ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಗುಣಮಟ್ಟದ ಬೋಧನೆ, ಅನುಭವಿ ಬೋಧಕ ವರ್ಗ, ಪ್ರಯೋಗಾಲಯ ಆಧಾರಿತ ಕಲಿಕೆ ಹಾಗೂ ವಿದ್ಯಾರ್ಥಿ ಕೇಂದ್ರಿತ ಶೈಕ್ಷಣಿಕ ವಾತಾವರಣ ನೆರವಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor