×
Ad

ಭಟ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮದ್ಯವರ್ಜನ ಶಿಬಿರ

Update: 2025-12-04 14:36 IST

ಭಟ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಡೆಯುವ 2016ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ ತಾಲೂಕಿನ ಬಸ್ತಿಮಕ್ಕಿಯಲ್ಲಿರುವ ಶ್ರೀ ರಾಘವೇಶ್ವರ ಸ್ವಾಮೀಜಿ ಹವ್ಯಕ ಸಭಾ ಭವನದಲ್ಲಿ ನಡೆಯಿತು.

ಶಿಬಿರವನ್ನು ಮುರ್ಡೇಶ್ವರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಹಣಮಂತ ಬೀರಾದಾರ ಅವರು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮದ್ಯವರ್ಜನ ವ್ಯವಸ್ಥಾಪನಾ ಸಮಿತಿ ಮುರ್ಡೇಶ್ವರದ ಅಧ್ಯಕ್ಷ ಸತೀಶ ಶೇಟ್ ವಹಿಸಿದ್ದರು.

ಮುಖ್ಯ ಅತಿಥಿಗಳಾದ ಉಪಸ್ಥಿತರಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹೇಶ್, ಉತ್ತರ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ವಾಮನ ನಾಯ್ಕ ಮಂಕಿ, ಶ್ರೀಧರ ನಾಯ್ಕ ಆಸರಕೇರಿ, ಸಾಥಯ್ಯ ಹೊನ್ನ ನಾಯ್ಕ ಮಾನತಾಡಿದರು.

ವೇದಿಕೆಯಲ್ಲಿ ಶ್ರೀ ರಾಘವೇಶ್ವರ ಭಾರತಿ ಹವ್ಯಕ ಸಭಾಭವನ ಮಾಲಕ ಕೃಷ್ಣಾನಂದ ಭಟ್ಟ ಬಲ್ಸೆ, ಮಾವಳ್ಳಿ-1 ಗ್ರಾಮ ಪಂಚಾಯತ್ ಅಧ್ಯಕ್ಷೆ ನಯನಾ ನಾಗೇಶ ನಾಯ್ಕ, ಗ್ರಾಮ ಪಂಚಾಯತ್ ಮಾವಳ್ಳಿ-2ರ ಅಧ್ಯಕ್ಷೆ ನಾಗರತ್ನ ಪಡಿಯಾರ್, ಗಣ್ಯರಾದ ಶಂಕರ ಭಟ್ರಹಿತ್ಲು ಉಪಸ್ಥಿತರಿದ್ದರು

ಕರಾವಳಿ ಪ್ರಾದೇಶಿಕ ಕಚೇರಿ ಉಡುಪಿಯ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಜನಜಾಗೃತಿ ವೇದಿಕೆ ಪ್ರಾರಂಭ, ವೇದಿಕೆ ಮೂಲಕ ಸಾಮಾಜಿಕ ಆಂದೋಲನ, ಮದ್ಯವರ್ಜನ ಶಿಬಿರ ಅನುಷ್ಠಾನ, ಮದ್ಯವರ್ಜನ ಶಿಬಿರದ ರೂಪುರೇಷೆ, ಮದ್ಯವರ್ಜನ ಶಿಬಿರದ ದೈನಂದಿನ ದಿನಚರಿ ಕಾರ್ಯಕ್ರಮಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ಭಟ್ಕಳ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿ ಲತಾ ಬಂಗೇರ ಸ್ವಾಗತಿಸಿದರು. ಮೇಲ್ವಿಚಾರಕ ಪ್ರಭಾಕರ ನಿರೂಪಿಸಿದರು. ಮಾಲಿನಿ ವಂದಿಸಿದರು.

ಎಂಟು ದಿನಗಳ ಕಾಲ ನಡೆಯಲಿರುವ ಮದ್ಯ ವರ್ಜನ ಶಿಬಿರವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿಯ ದಿವಾಕರ್ ಪೂಜಾರಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಆರೋಗ್ಯ ಸಹಾಯಕರಾದ ಪ್ರೆಸಿಲ್ಲಾ ಡಿಸೋಜಾ ಇವರು ಶಿಬಿರಾಧಿಕಾರಿಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಭಟ್ಕಳ ತಾಲೂಕಿನ ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು, ಒಕ್ಕೂಟದ ಅಧ್ಯಕ್ಷರು/ಪದಾಧಿಕಾರಿಗಳು, ಪ್ರಗತಿಬಂಧು ಸ್ವ-ಸಹಾಯ ಸಂಘದ ಸದಸ್ಯರುಗಳು, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಭಟ್ಕಳ ತಾಲೂಕು, ನವಜೀವನ ಸಮಿತಿ ಸದಸ್ಯರು ಮತ್ತು ಸಾರ್ವಜನಿಕರು ಸಹಕರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News