Bhatkal : ಅಲ್ವಂಕಿ ಘಾಟ್‌ನಲ್ಲಿ ಬಸ್ ಪಲ್ಟಿ; ಐವರಿಗೆ ಗಾಯ
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಗೇರ್ಸೊಪ್ಪ ಸಮೀಪದ ಅಲ್ವಂಕಿ ಘಾಟ್‌ನಲ್ಲಿ ರವಿವಾರ ರಾತ್ರಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಕನಿಷ್ಠ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಮಾಹಿತಿಯ ಪ್ರಕಾರ, ಶ್ರೀ ಕುಮಾರ್ ಟ್ರಾವೆಲ್ಸ್ ಎಂಬ ಖಾಸಗಿ ಬಸ್ ರವಿವಾರ ರಾತ್ರಿ ಸುಮಾರು 8.30ರ ಸುಮಾರಿಗೆ ಭಟ್ಕಳದಿಂದ ಬೆಂಗಳೂರಿನತ್ತ ಹೊನ್ನಾವರ ಮಾರ್ಗವಾಗಿ ಹೊರಟಿತ್ತು. ಭಟ್ಕಳದಿಂದ ಸುಮಾರು 60 ಕಿ.ಮೀ ದೂರದ ಗೇರ್ಸೊಪ್ಪ ಸಮೀಪದ ಅಲ್ವಂಕಿ ಘಾಟ್‌ನಲ್ಲಿ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಬಸ್ ಪಲ್ಟಿಯಾಗಿದೆ ತಿಳಿದುಬಂದಿದೆ.
ಘಟನೆಯಲ್ಲಿ ಐವರು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸಾಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅಪಘಾತದ ಮಾಹಿತಿ ದೊರಕುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.
ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.