Bhatkal | ಮಾನಸಿಕ ಖಿನ್ನತೆಗೊಳಗಾಗಿ ಮೀನುಗಾರ ಆತ್ಮಹತ್ಯೆ
ಭಟ್ಕಳ : ತಾಲೂಕಿನ ಮುಂಡಳ್ಳಿ ಸಮೀಪದ ಕೆಪ್ಟಿಮನೆ–ಹಾವಳಿಕಂಠದ ನಿವಾಸಿ ಹಾಗೂ ಮೀನುಗಾರ ಹರೀಶ್ ಗೋವಿಂದ ಮೊಗೇರ (35) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ವೈಯಕ್ತಿಕ ಕಾರಣಗಳಿಂದಾಗಿ ಕಳೆದ ಕೆಲ ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಹರೀಶ್, ಮನೆಯ ಅಡುಗೆ ಕೋಣೆಯಲ್ಲಿದ್ದ ಕಬ್ಬಿಣದ ರಾಡಿಗೆ ಸೀರೆಯನ್ನು ಕಟ್ಟಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು.
ಈ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬರಬೇಕಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.