×
Ad

ಭಟ್ಕಳ: ಕರ್ಣಾಟಕ ಬ್ಯಾಂಕ್ ಶಾಖೆಯ ಗೋಲ್ಡನ್ ಜುಬಿಲಿ ಕಾರ್ಯಕ್ರಮ

Update: 2025-12-30 18:02 IST

ಭಟ್ಕಳ: ನಗರದ ರಂಗೀಕಟ್ಟೆಯಲ್ಲಿರುವ ಕರ್ಣಾಟಕ ಬ್ಯಾಂಕ್ ಶಾಖೆ ಆರಂಭವಾಗಿ 50 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಗೋಲ್ಡನ್ ಜುಬಿಲಿ ಕಾರ್ಯಕ್ರಮವನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಹಸೀಲ್ದಾರ್ ನಾಗೇಂದ್ರ ಕೋಳಶೆಟ್ಟಿ, ಕರ್ಣಾಟಕ ಬ್ಯಾಂಕ್ ಶತಮಾನಕ್ಕೂ ಅಧಿಕ ಇತಿಹಾಸ ಹೊಂದಿದ್ದು, ಭಟ್ಕಳ ಶಾಖೆ 50 ವರ್ಷಗಳನ್ನು ಪೂರೈಸಿರುವುದು ಹೆಮ್ಮೆಯ ವಿಷಯ ಎಂದರು. ಭಟ್ಕಳ ಶಾಖೆಯ ಸಿಬ್ಬಂದಿಗಳ ನಗುಮೊಗದ ಸೇವೆ ಹಾಗೂ ಗ್ರಾಹಕ ಸ್ನೇಹಿ ವ್ಯವಹಾರ ಶ್ಲಾಘನೀಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಉಡುಪಿ ಪ್ರಾದೇಶಿಕ ಉಪ ಮಹಾಪ್ರಬಂಧಕ ರಮೇಶ್ ವೈದ್ಯ, ಬ್ಯಾಂಕ್ 102 ವರ್ಷಗಳಿಂದ ಲಾಭದಲ್ಲೇ ಕಾರ್ಯನಿರ್ವಹಿಸುತ್ತಿದ್ದು, ಕೋವಿಡ್ ಅವಧಿಯ ಹೊರತು ಪ್ರತಿವರ್ಷವೂ ಶೇರುದಾರರಿಗೆ ಡಿವಿಡೆಂಡ್ ನೀಡಿದೆ ಎಂದು ತಿಳಿಸಿದರು. ಬ್ಯಾಂಕ್ ಸದೃಢವಾಗಿದ್ದು ಗ್ರಾಹಕರು ಅಪಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದರು.

ಗೋಲ್ಡನ್ ಜುಬಿಲಿ ಪ್ರಯುಕ್ತ ಭಟ್ಕಳ ಶಾಖೆಯ ಪ್ರಥಮ ಗ್ರಾಹಕ ಗಣಪತಿ ಎಂ. ಭಟ್ಟ ಸೇರಿದಂತೆ ಆಯ್ದ ಗ್ರಾಹಕರನ್ನು ಸನ್ಮಾನಿಸಲಾಯಿತು. ಶಾಖಾ ಪ್ರಬಂಧಕ ಸುನಿಲ್ ಪೈ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ದರು. ಕಾರ್ಯಕ್ರಮದಲ್ಲಿ ಕ್ಲಸ್ಟರ್ ಹೆಡ್ ರಂಜಿತ್ ಶೆಟ್ಟಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News