×
Ad

ಭಟ್ಕಳ: ಆಟೋ ರಿಕ್ಷಾ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು

Update: 2023-11-06 08:31 IST

ಭಟ್ಕಳ: ರಸ್ತೆ ದಾಟುತ್ತಿರುವಾಗ ಆಟೋ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ರಂಗಿನಕಟ್ಟೆಯಲ್ಲಿ ನಡೆದಿದೆ.

ಮೃತರನ್ನು ಮುಹಮ್ಮದ್ ಅಶ್ರಫ್ ಇಬ್ನ್ ಅಬ್ದುಲ್ ರಶೀದ್ ಖಾನ್ (60) ಎಂದು ಗುರುತಿಸಲಾಗಿದೆ.

ಮುಹಮ್ಮದ್ ಅಶ್ರಫ್ ಅವರು ರಂಗಿನಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಇನ್ನೊಂದು ಬದಿಯಲ್ಲಿರುವ ತನ್ನ ಮನೆಗೆ ಹೋಗಲು ಹೆದ್ದಾರಿ ದಾಟುತ್ತಿದ್ದಾಗ ನವಯತ್ ಕಾಲೋನಿಯಿಂದ ಸರ್ಕಲ್ ಕಡೆಗೆ ಹೋಗುತ್ತಿದ್ದ ಆಟೋ ಅಪ್ಪಳಿಸಿದೆ

ಗಂಭೀರವಾಗಿ ಗಾಯಗೊಂಡಿದ್ದ ಅಶ್ರಫ್ ಅವರನ್ನು ಸ್ಥಳೀಯರು ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಮಂಗಳೂರಿಗೆ ಸಾಗಿಸುವ ದಾರಿ ಮಧ್ಯೆ ಕಂದಾಪುರ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News