ಭಟ್ಕಳ: ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ
Update: 2026-03-06 23:30 IST
ಭಟ್ಕಳ: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿಯೋರ್ವ ಮನನೊಂದು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಭಟ್ಕಳ ತಾಲೂಕಿನ ಹೆಬಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊನ್ನೆಗದ್ದೆ ಎಂಬಲ್ಲಿ ಶುಕ್ರವಾರ ನಡೆದಿದೆ.
ಆತ್ಮಹತ್ಯಗೈದ ವಿದ್ಯಾರ್ಥಿಯನ್ನು ಕೌಶಿಕ್ ಸುಬ್ರಾಯ ನಾಯ್ಕ(18) ಎಂದು ಗುರುತಿಸಲಾಗಿದೆ.
ವಿದ್ಯಾರ್ಥಿಯ ಈ ಸಾವಿಗೆ ಪರೀಕ್ಷಾ ಒತ್ತಡ ಕಾರಣವೇ ಅಥವಾ ಬೇರೆ ಯಾವುದಾದರೂ ಸಮಸ್ಯೆಗಳಿದ್ದವೇ ಎಂಬ ಬಗ್ಗೆ ನಿಖರವಾದ ಕಾರಣಗಳು ಇನ್ನು ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವಿದ್ಯಾರ್ಥಿಯ ತಂದೆ ಸುಬ್ರಾಯ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.