×
Ad

ಭಟ್ಕಳ: ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಶ್ರೀಧರ್ ನಾಯ್ಕ ಬಂಧನ

Update: 2023-11-18 19:06 IST

ಭಟ್ಕಳ: ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಆರೋಪದಲ್ಲಿ ಶಾಲೆಯ ಮುಖ್ಯೋಪಾಧ್ಯಾಯನ ವಿರುದ್ಧ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮುಖ್ಯ ಶಿಕ್ಷಕ ಶ್ರೀಧರ್ ನಾಯ್ಕ (58) ಎಂದು ಗುರುತಿಸಲಾಗಿದೆ.

ಮೂರು ತಿಂಗಳ ಹಿಂದೆ ಕುಮಟಾ ತಾಲೂಕಿನಿಂದ ಹೆಚ್ಚುವರಿ ಶಿಕ್ಷಕನಾಗಿ ಭಟ್ಕಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯೊಂದರಲ್ಲಿ ಮುಖ್ಯ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ ಎಂದು ತಿಳಿದುಬಂದಿದೆ.

ಕಳೆದ ಹಲವು ದಿನಗಳಿಂದ ಶಾಲೆಯ ಇಬ್ಬರು ಬಾಲಕಿಯರಿಗೆ ಹಣದ ಆಸೆಯನ್ನು ತೋರಿಸಿ ಅವರ ಖಾಸಗಿ ಅಂಗಾಂಗಗಳನ್ನು ಸ್ಪರ್ಶಿಸುತ್ತಿದ್ದ ಎಂಬ ಆರೋಪವಿದ್ದು, ಪಾಲಕರು ನೀಡಿದ ದೂರಿನ ಅನ್ವಯ ಆರೋಪಿ ಶ್ರೀಧರ್ ನಾಯ್ಕ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಬಂಧಿಸಲಾಗಿದೆ ಎಂದು ನಗರ ಠಾಣೆ ಪಿಎಸೈ ಶಿವಾನಂದ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News