ಭಟ್ಕಳ | ತಲಾಂದ ಶಾಲೆಯಲ್ಲಿ ಪುರವರ್ಗ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
ಭಟ್ಕಳ: ತಲಾಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಪುರವರ್ಗ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ – 2025-26 ಕಾರ್ಯಕ್ರಮವು ಗುರುವಾರ ಸಡಗರದಿಂದ ಜರುಗಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಮತ್ತು ಸಮೂಹ ಸಂಪನ್ಮೂಲ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಕ್ಕಳು ತಮ್ಮ ವೈವಿಧ್ಯಮಯ ಪ್ರತಿಭೆಗಳನ್ನು ಮೆರೆದರು.
ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣವನ್ನು ತಳಿರು ತೋರಣಗಳಿಂದ ಸಿಂಗಾರಿಸಲಾಗಿದ್ದು, ಹಬ್ಬದ ವಾತಾವರಣ ನಿರ್ಮಾಣವಾಯಿತು. ವಿದ್ಯಾರ್ಥಿಗಳು ಛದ್ಮವೇಷ, ಕ್ಲೇ ಮಾಡೆಲಿಂಗ್, ಆಶುಭಾಷಣ, ಕಂಠಪಾಠ, ಧಾರ್ಮಿಕ ಪಠಣ, ಲಘು ಸಂಗೀತ, ಕಥೆ ಹೇಳುವುದು, ಚಿತ್ರಕಲೆ, ಬಣ್ಣಹಚ್ಚುವಿಕೆ, ಅಭಿನಯಗೀತೆ, ಭಕ್ತಿಗೀತೆ ಮುಂತಾದ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಮುಟ್ಟಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರಜಿನಿ ನಾಯ್ಕ ಅವರು, “ಮಕ್ಕಳಲ್ಲಿರುವ ಅಡಗಿದ ಪ್ರತಿಭೆಯನ್ನು ಹೊರತರುವ ಅತ್ಯುತ್ತಮ ವೇದಿಕೆಯೇ ಪ್ರತಿಭಾ ಕಾರಂಜಿ” ಎಂದು ಹೇಳಿದರು.
ಯಲ್ವಡಿಕವೂರ ಪಂಚಾಯತ್ ಅಧ್ಯಕ್ಷೆ ಪಾರ್ವತಿ ಗೊಂಡ ಮಾತನಾಡಿದರು.
ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ನಾಗೇಶ ಹೆಬ್ಬಾರ, ಉಪಾಧ್ಯಕ್ಷೆ ಲಕ್ಷ್ಮೀ ಗೊಂಡ, ಸದಸ್ಯರು ದೇವಯ್ಯ ನಾಯ್ಕ, ಗಣಪತಿ ನಾಯ್ಕ, ಜಯಶ್ರೀ ನಾಯ್ಕ, ಶೇಷಗಿರಿ ನಾಯ್ಕ, ಕ್ಷೇತ್ರ ಸಮನ್ವಯಾಧಿಕಾರಿ ಪೊಣಿಮಾ ಮೊಗೇರ, ಕಟ್ಟೇವಿರ ಯುವಕ ಸಂಘ ಅಧ್ಯಕ್ಷ ಜಗದೀಶ ನಾಯ್ಕ, ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಜು ಸಂಕಪ್ಪ ನಾಯ್ಕ, ಮೋಹನ ಗೊಂಡ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.
ಬಿಆರ್‌ಸಿ ಜಯಶ್ರೀ ಆಚಾರ್ಯ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ಬೇಬಿ ದೇವಡಿಗ ವಂದನೆ ಸಲ್ಲಿಸಿದರು. ಶಿಕ್ಷಕ ವಿಜಯ ಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿದರು.