×
Ad

ಭಟ್ಕಳ: ವಿದ್ಯುತ್ ಕಂಬ ಬಿದ್ದು ಕಾರ್ಮಿಕ ಮೃತ್ಯು

Update: 2024-06-23 10:50 IST

ದಾಮೋದರ ಈರಯ್ಯ ಗೊಂಡ

ಭಟ್ಕಳ: ಇಲ್ಲಿನ ಹೆಸ್ಕಾಂ ಕಚೇರಿಗೆ ಕೂಲಿ ಕೆಲಸಕ್ಕೆಂದು ಬಂದ ವ್ಯಕ್ತಿಯೋರ್ವ ಕೆಲಸ ಮಾಡುತ್ತಿರುವಾಗಲೇ ಆಯ ತಪ್ಪಿ ವಿದ್ಯುತ್ ಕಂಬ ಮೈ ಮೇಲೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಮುರುಡೇಶ್ವರದ ಕಟಗಾರಕೊಪ್ಪ ಮುಲ್ಲೆಪಾಲ ನಿವಾಸಿ ದಾಮೋದರ ಈರಯ್ಯ ಗೊಂಡ   (32) ಎಂದು ಗುರುತಿಸಲಾಗಿದೆ. ತೊಡೆಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದು  ಗಂಭೀರವಾಗಿ ಗಾಯಗೊಂಡ ಇವರನ್ನು ಚಿಕಿತ್ಸೆಗಾಗಿ ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ನಂತರ ಇದ್ದಕ್ಕಿದ್ದಂತೆ ಉಸಿರಾಟದ ಸಮಸ್ಯೆಯುಂಟಾದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭಿಸಿದೆ.

ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News