ಭಟ್ಕಳ: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು
Update: 2025-12-01 22:59 IST
ಭಟ್ಕಳ: ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲು ಢಿಕ್ಕಿ ಹೊಡೆದು ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ವರದಿಯಾಗಿದೆ.
ಹಾಡುವಳ್ಳಿ ಗ್ರಾಮದ ಹುಡೀಲು ನಿವಾಸಿ ಯೋಗೇಶ್ ಮಂಜು ಗೋಂಡ (24) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.
ಶಿರಾಲಿ ಗ್ರಾಮದ ಕೆಂಬ್ರೆ ಬಳಿ ಕೊಂಕಣ ರೈಲು ಹಳಿಯ ಪಕ್ಕ ಯುವಕ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ರೈಲು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಘಟನೆಯ ಕುರಿತು ಮೃತನ ತಂದೆ ಮಂಜು ಗೋಂಡ ಅವರು ಭಟ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.