×
Ad

ಭಟ್ಕಳ: ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Update: 2023-11-30 09:40 IST

ಭಟ್ಕಳ: ರಸ್ತೆಗೆ ಅಡ್ಡ ಬಂದ ದನ ತಪ್ಪಿಸಲು ಹೋದ ಆಟೋರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಹಿನ್ನೆಲೆ  ಗಂಭೀರವಾಗಿ ಗಾಯಗೊಂಡು ಆಟೋ ಚಾಲಕ ಸಾವನಪ್ಪಿರುವ ಘಟನೆ ಮಾರುಕೇರಿ ಕೋಟಖಂಡದಲ್ಲಿ ನಡೆದಿದೆ.

ಮೃತ ಆಟೋ ಚಾಲಕನನ್ನು ನಾಗೇಶ ಕೃಷ್ಣ ಗೊಂಡ ಎಂದು ತಿಳಿದು ಗುರುತಿಸಲಾಗಿದೆ. ಇವರು ಭಟ್ಕಳ ಕಡೆಯಿಂದ ಮಾರುಕೇರಿ ಕಡೆಗೆ ಆಟೋ ಚಲಾಯಿಸಿಕೊಂಡು ಹೋಗುತ್ತಿದ್ದರು ಎನ್ನಲಾಗಿದ್ದು, ಕೊಟಖಂಡ ಸಮೀಪ ರಸ್ತೆಗೆ ದನ ಅಡ್ಡ ಬಂದ ಹಿನ್ನೆಲೆ ದನವನ್ನು ತಪ್ಪಿಸಲು ಹೋಗಿ  ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ .

ಅಪಘಾತದಲ್ಲಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು,  ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ವೇಳೆ ಗೊರಟೆ ಕ್ರಾಸ್ ಸಮೀಪ ಸಾವನ್ನಪ್ಪಿದ್ದಾರೆ. ಆಟೋ ಹಿಂಬದಿಯಲ್ಲಿದ್ದ ನಾಗರಾಜ ನಾಯ್ಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ಗಾಯಾಳು ನಾಗರಾಜ್ ನಾಯ್ಕ ದೂರು ನೀಡಿದ್ದು ಪ್ರಕರಣವನ್ನು ದಾಖಲಿಸಿಕೊಂಡ ಸಿ.ಪಿ.ಐ ಚಂದನಗೋಪಾಲ.ವಿ ತನಿಖೆ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News