ದಾಂಡೇಲಿ | ಕೆಎಸ್ಸಾರ್ಟಿಸಿ ಬಸ್ ಡಿಪೋದಲ್ಲಿ ಬಸ್ ಚಾಲಕ ಆತ್ಮಹತ್ಯೆಗೆ ಯತ್ನ
Update: 2025-02-24 13:01 IST
ಕಾರವಾರ: ಸಾರಿಗೆ ಡಿಪೋದಲ್ಲಿ ಬಸ್ ಚಾಲಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ದಾಂಡೇಲಿ ನಗರದ ಹಳೆ ದಾಂಡೇಲಿಯಲ್ಲಿ ನಡೆದಿದೆ.
ಆರ್.ಬಿ.ಗಿಡಜಾಡರ ಆತ್ಮಹತ್ಯೆಗೆ ಯತ್ನಿಸಿದ ಕೆಎಸ್ಸಾರ್ಟಿಸಿ ಬಸ್ ಚಾಲಕ. ಇವರು ಸಾರಿಗೆ ಡಿಪೋದಲ್ಲಿ ಫಿನಾಯಿಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆನ್ನಲಾಗಿದೆ. ಅಲ್ಲಿದ್ದ ಸಿಬ್ಬಂದಿ ತಕ್ಷಣ ಅವರನ್ನು ಸಾರಿಗೆ ಬಸ್ಸಿನಲ್ಲಿ ನಗರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ತನಿಖೆ ಮುಂದುವರಿದಿದೆ.