ಭಟ್ಕಳದಲ್ಲಿ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಅಸ್ಥಿತ್ವಕ್ಕೆ
Update: 2025-08-15 17:42 IST
ಭಟ್ಕಳ: ಭಟ್ಕಳ ತಾಲೂಕಿನಲ್ಲಿ ಕಾರ್ಯನಿರತ ಪತ್ರಕರ್ತರ ಧ್ವನಿ ಎಂಬ ನೂತನ ಪತ್ರಕರ್ತರ ಸಂಘಟನೆ ಅಸ್ಥಿತ್ವಕ್ಕೆ ಬಂದಿದ್ದು ತಾಲೂಕು ಘಟಕದ ಅಧ್ಯಕ್ಷರಾಗಿ ಶಂಕರ್ ನಾಯ್ಕ್, ಪ್ರಧಾನ ಕಾರ್ಯದರ್ಶಿಯಾಗಿ ಅರ್ಜುನ್ ಎಂ. ಮಲ್ಯ ಆಯ್ಕೆಯಾಗಿದ್ದಾರೆ ಎಂದು ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್ ಬಂಗ್ಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಾಧ್ಯಕ್ಷರಾಗಿ ಉಲ್ಲಾಸ್ ಶಾನಭಾಗ್, ಖಜಾಂಚಿಯಾಗಿ ನಸೀಮುಲ್ ಘನಿ ಶಾಬಂದ್ರಿ ಆಯ್ಕೆಯಾಗಿದ್ದಾರೆ.
"ರಾಜ್ಯದ ಯಾವುದೇ ಭಾಗದಲ್ಲಿ ಪತ್ರಕರ್ತರ ಮೇಲೆ ದಾಳಿ ಅಥವಾ ದಬ್ಬಾಳಿಕೆಯಾದರೆ, ನಮ್ಮ ಸಂಘಟನೆ ದೃಢವಾಗಿ ಬೆಂಬಲವಾಗಿ ನಿಲ್ಲಲಿದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್ ಬಂಗ್ಲೆ ತಿಳಿಸಿದ್ದಾರೆ.