×
Ad

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Update: 2023-10-13 16:45 IST

ಚಕ್ರವರ್ತಿ ಸೂಲಿಬೆಲೆ

ಕಾರವಾರ: ಯುವ ಬ್ರೀಗೇಡ್‌ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾರವಾರದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ಕಾರವಾರಕ್ಕೆ ಆಗಮಿಸಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕಾರವಾರ ಗ್ರಾಮೀಣ ಪೊಲೀಸರು ಸುಮೊಟೋ ಕೇಸ್ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿಗೆ ಜಣಗಣಮನ ಅಭಿಯಾನ ಹಿನ್ನೆಲೆ ಕಾರವಾರದ ಕಡವಾಡ ಗ್ರಾಮಕ್ಕೆ ಆಗಮಿಸಿದ್ದ ಚಕ್ರವರ್ತಿ ಸೂಲಿಬೆಲೆ, ಈ ವೇಳೆ ಕಾರವಾರ ತಾಲೂಕಿನ ಕಡವಾಡದ ಬೋವಿವಾಡದಲ್ಲಿರುವ ಶ್ರೀ ಆದಿಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಈ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ.

ಮಾಧ್ಯಮಗಳ ಜೊತೆ ಮಾತನಾಡಿದ್ದ ಚಕ್ರವರ್ತಿ ಸೂಲಿಬೆಲೆ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂಗಳು ಬದುಕುವುದು ಕಷ್ಟ. ಮುಸ್ಲಿಮರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭಯ ಹಸ್ತವಿದೆ ಎಂದು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮುಖಂಡರನ್ನು ಟೀಕಿಸಿದ್ದ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಪ್ರಕರಣ ಸಂಬಂಧಿಸಿ ಹಿಂದು-ಮುಸ್ಲಿಂ ಧರ್ಮಗಳ ನಡುವೆ ವೈಮನಸ್ಸು ಉಂಟು ಮಾಡುವ ಹೇಳಿಕೆ ನೀಡಿದ್ದ ಆರೋಪ ಮೇಲೆ ಕಾರವಾರದ ಗ್ರಾಮೀಣ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ತನಿಖೆ ಮುಂದುವರಿದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News