×
Ad

ಉ.ಕ. ನೂತನ ಜಿಲ್ಲಾಧಿಕಾರಿಯಾಗಿ ಗಂಗೂಬಾಯಿ ಮಾನಕರ್ ನೇಮಕ

Update: 2023-07-25 23:09 IST

ಗಂಗೂಬಾಯಿ ಮಾನಕರ

ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದ್ದು ನೂತನ ಡಿಸಿಯಾಗಿ ಗಂಗೂಬಾಯಿ ಮಾನಕರ ಅವರನ್ನು ನೇಮಕ ಮಾಡಲಾಗಿದೆ.

ಪ್ರಸ್ತುವ ರಾಜ್ಯ ಮಾಹಿತಿ ಆಯೋಗದ ಕಾರ್ಯದರ್ಶಿಯಾಗಿದ್ದ ಗಂಗೂಬಾಯಿ ರಮೇಶ ಮಾನಕರ ಅವರು ಉತ್ತರ ಕನ್ನಡ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಗಳಾಗಿ ನೇಮಕ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರ ವರ್ಗಾವಣೆಯಾದ ಸ್ಥಾನಕ್ಕೆ ಗಂಗೂಬಾಯಿ ಅವರನ್ನು ನೇಮಕ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಆದರೆ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಯಾವ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ ಎಂಬುದರ ಬಗ್ಗೆ ಸುತ್ತೋಲೆಯಲ್ಲಿ ತಿಳಿಸಲಾಗಿಲ್ಲ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News