ಜು.26: ಉ.ಕ. ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ
Update: 2025-07-25 19:13 IST
ಭಟ್ಕಳ: ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿರುವುದರಿಂದ ಹಾಗೂ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲ್ಲೂಕುಗಳ ಪ್ರಾಥಮಿಕ, ಪ್ರೌಡ ಶಾಲೆ, ಅಂಗನವಾಡಿ ಹಾಗೂ ಎಲ್ಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.