ಜು.23: ಉ.ಕ. ಜಿಲ್ಲೆಯ 5 ತಾಲ್ಲೂಕುಗಳಲ್ಲಿ ಶಾಲೆ, ಅಂಗನವಾಡಿಗಳಿಗೆ ರಜೆ
Update: 2025-07-22 23:36 IST
ಭಟ್ಕಳ: ಭಾರತೀಯ ಹವಾಮಾನ ಇಲಾಖೆ (IMD) ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲೆಗಳಿಗೆ ರಜೆ ನೀಡಿ ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದೆ.
ಜಿಲ್ಲಾ ಅಪರ ಜಿಲ್ಲಾಧಿಕಾರಿ ಪ್ರಕಟಿಸಿರುವ ಆದೇಶದನ್ವಯ, ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳೊಂದಿಗೆ ಅಂಗನವಾಡಿಗಳಿಗೆ ಜುಲೈ 23ರಂದು ರಜೆ ಘೋಷಿಸಲಾಗಿದೆ.
ಮಳೆಯ ಭೀತಿಯಿಂದ ಮಕ್ಕಳಿಗೆ ಅನಾನುಕೂಲವಾಗದಂತೆ ಹಾಗೂ ಯಾವುದೇ ಅವಘಡಗಳು ಸಂಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಈ ತಾತ್ಕಾಲಿಕ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.