×
Ad

ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಮನೆ ಮೇಲೆ ಈಡಿ ದಾಳಿ

Update: 2025-08-13 12:04 IST

ಕಾರವಾರ: ಬೇಲೇಕೇರಿ ಅದಿರು ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಅವರ ಸದಾಶಿವಗಡದಲ್ಲಿರುವ ಮನೆ ಮೇಲೆ ಬುಧವಾರ ಬೆಳಗ್ಗೆ ಈಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯ ಸಮಯದಲ್ಲಿ ಅವರು ವಿಧಾನಸಭೆ ಅಧಿವೇಶನಕ್ಕಾಗಿ ಬೆಂಗಳೂರಿಗೆ ತೆರಳಿದ್ದರು.

ನಾಲ್ಕೈದು ಕಾರುಗಳಲ್ಲಿ ಬಂದ ಈಡಿ ಅಧಿಕಾರಿಗಳ ತಂಡವು ಶಾಸಕರ ಮನೆಯನ್ನು ಶೋಧಿಸಿದ್ದು, ಮನೆಯ ಹೊರಗಡೆ ಸಿಐಎಸ್‌ಎಫ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಸತೀಶ್ ಸೈಲ್ ಅವರು ಹಿಂದೆ ಬೇಲೆಕೇರಿ ಅದಿರು ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಡೆ ಬಂದಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News