ಕಾರವಾರ| ಟ್ಯಾಂಕರ್ - ಬಸ್ ನಡುವೆ ಮುಖಾಮುಖಿ ಢಿಕ್ಕಿ: ಇಬ್ಬರು ಸ್ಥಳದಲ್ಲೇ ಮೃತ್ಯು; 10 ಮಂದಿಗೆ ಗಂಭೀರ ಗಾಯ
Update: 2025-09-18 20:05 IST
ಕಾರವಾರ : ಅಂಕೋಲಾ ತಾಲೂಕಿನ ಬಾಳೇಗುಳಿ – ಯಲ್ಲಾಪುರ ಸಮೀಪ ಟ್ಯಾಂಕರ್ ಹಾಗೂ ಸರ್ಕಾರಿ ಬಸ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ.
ಅಂಕೋಲಾ ಕೇಣಿ ಗ್ರಾಮದ ಭಾಸ್ಕರ್ ಪಾಂಡುರಂಗ ಗಾಂವ್ಕರ್ ಹಾಗೂ ಲಾರಿ ಚಾಲಕ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬಸ್ ನಲ್ಲಿದ್ದ ಹತ್ತು ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಅಂಕೋಲಾದಿಂದ ಯಲ್ಲಾಪುರ ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಎದುರಿನಲ್ಲಿ ಬರುತ್ತಿದ್ದ ಬಸ್ ಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದ್ದು, ಗಾಯಗೊಂಡ ಹತ್ತು ಮಂದಿಯನ್ನು ಪ್ರಥಮ ಚಿಕಿತ್ಸೆಗಾಗಿ ಅಂಕೋಲಾ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಕಳುಹಿಸಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಂಕೋಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.