ಕಾರವಾರ: ಕದಂಬ ನೌಕಾನೆಲೆಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು; ಗಣ್ಯರಿಂದ ಸ್ವಾಗತ
Update: 2025-12-28 11:50 IST
ಕಾರವಾರ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಾರವಾರದ ಕದಂಬ ನೌಕಾನೆಲೆಗೆ ಆಗಮಿಸಿದ್ದು, ಅವರನ್ನು ರಾಜ್ಯಪಾಲರು ಹಾಗೂ ಸಚಿವರು ಆತ್ಮೀಯವಾಗಿ ಬರಮಾಡಿಕೊಂಡರು.
ನೌಕಾನೆಲೆಗೆ ಆಗಮಿಸಿದ ರಾಷ್ಟ್ರಪತಿಗಳನ್ನು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ಎಸ್. ವೈದ್ಯ ಅವರು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಯಂತಿ ಹಾಗೂ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಉಪಸ್ಥಿತರಿದ್ದರು. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಾದ ಎಡಿಜಿಪಿ ಹಿತೇಂದ್ರ, ಐಜಿಪಿ ಅಮಿತ್ ಸಿಂಗ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ. ಎನ್. ಅವರು ಸ್ಥಳದಲ್ಲಿದ್ದರು.
ಇವರೊಂದಿಗೆ ಕಾರವಾರ ನೌಕಾನೆಲೆಯ ರಿಯರ್ ಅಡ್ಮಿರಲ್ ವಿಕ್ರಂ ಮೆನನ್ ಹಾಗೂ ನೌಕಾಪಡೆಯ ಇತರ ಹಿರಿಯ ಅಧಿಕಾರಿಗಳು ಹಾಜರಿದ್ದರು.