×
Ad

ಮೇ 31: ಪದ್ಮಶ್ರೀ ಡಾ. ಖಾದರ್ ವಲಿ ಅವರ ‘ಆಹಾರವೇ ಆರೋಗ್ಯ’ ಉಪನ್ಯಾಸ

Update: 2026-05-30 15:36 IST

ಭಟ್ಕಳ: ಆಹಾರ ವಿಜ್ಞಾನಿ, ಪೌಷ್ಟಿಕಾಂಶ ತಜ್ಞ ಹಾಗೂ ‘ಮಿಲ್ಲೆಟ್ ಮ್ಯಾನ್ ಆಫ್ ಇಂಡಿಯಾ’ ಖ್ಯಾತಿಯ ಪದ್ಮಶ್ರೀ ಪುರಸ್ಕೃತ ಡಾ. ಖಾದರ್ ವಲಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ ‘ಆಹಾರವೇ ಆರೋಗ್ಯ’ ಮೇ 31ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಇಲ್ಲಿನ ನಾಗಯಕ್ಷೆ ಸಭಾಭವನದಲ್ಲಿ ನಡೆಯಲಿದೆ.

ತಾಲೂಕಿನ ಸ್ಪಂದನ ಸಂಸ್ಥೆ, ಕ್ರಿಯಾಶೀಲ ಗೆಳೆಯರ ಸಂಘ, ಲಯನ್ಸ್ ಕ್ಲಬ್ ಮುರುಡೇಶ್ವರ, ಸ್ವಾಮಿ ವಿವೇಕಾನಂದ ಜನಸ್ಪಂದನ ಫೌಂಡೇಶನ್ ಜಾಲಿ, ಸರ್ಪನಕಟ್ಟೆ ಕಟ್ಟೆ ಸ್ಪೋರ್ಟ್ಸ್ ಕ್ಲಬ್, ಶ್ರೀ ಕನ್ನಿಕಾ ಪರಮೇಶ್ವರಿ ಕ್ರೀಡಾ ಮತ್ತು ಸಾಂಸ್ಕೃತಿಕ ಯುವಕ ಸಂಘ ಮಾವಿನಕಟ್ಟೆ, ಶ್ರೀ ದುರ್ಗಾ ಯುವಕ ಮಂಡಲ ಅಳವೆಕೊಡಿ, ಪ್ರೀತಿ ಸ್ಪೋರ್ಟ್ಸ್ ಕ್ಲಬ್ ಶಿರಾಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಭಟ್ಕಳ ಹಾಗೂ ಭಟ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ ವಿವಿಧ ಸಂಘ–ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಉಪನ್ಯಾಸದಲ್ಲಿ ಸಿರಿಧಾನ್ಯಗಳ ಸಮರ್ಪಕ ಬಳಕೆ ಹಾಗೂ ಆರೋಗ್ಯಕರ ಆಹಾರ ಪದ್ಧತಿಯ ಕುರಿತು ಮಾಹಿತಿ ನೀಡಲಿರುವ ಡಾ. ಖಾದರ್ ವಲಿ, ಮಧುಮೇಹ, ರಕ್ತದೊತ್ತಡ, ಥೈರಾಯ್ಡ್, ಪಿಸಿಒಡಿ, ಗ್ಯಾಂಗ್ರಿನ್, ಡಯಾಲಿಸಿಸ್ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳ ಕುರಿತು ಮಾತನಾಡಲಿದ್ದು, ಸಾರ್ವಜನಿಕರೊಂದಿಗೆ ಸಂವಾದ ನಡೆಸಲಿದ್ದಾರೆ.

ಮೀನುಗಾರಿಕಾ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ್ ವೈದ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಾಗಯಕ್ಷೆ ಮಹಾಸತಿ ಧರ್ಮದೇವಿ ಸಂಸ್ಥಾನದ ಧರ್ಮದರ್ಶಿ ರಾಮದಾಸ ಪ್ರಭು ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿರುವರು.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆಯುವಂತೆ ಸಂಘಟಕರು ಕೋರಿದ್ದು, ಹೆಚ್ಚಿನ ಮಾಹಿತಿಗಾಗಿ 63612 73142 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಅಮೆರಿಕದಲ್ಲಿ ಐದು ವರ್ಷಗಳ ಕಾಲ ಆಹಾರ ವಿಜ್ಞಾನಿಯಾಗಿ ಸೇವೆ ಸಲ್ಲಿಸಿದ್ದ ಡಾ. ಖಾದರ್ ವಲಿ ಅವರು 1997ರಲ್ಲಿ ಭಾರತಕ್ಕೆ ಮರಳಿ ಮೈಸೂರಿನಲ್ಲಿ ನೆಲೆಸಿದ್ದು, ಕಳೆದ ಮೂರು ದಶಕಗಳಿಂದ ಆರೋಗ್ಯ ಜಾಗೃತಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಸಿರಿಧಾನ್ಯಗಳ ಮಹತ್ವವನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸಿರುವ ಕಾರಣ ಅವರಿಗೆ ‘ಮಿಲ್ಲೆಟ್ ಮ್ಯಾನ್ ಆಫ್ ಇಂಡಿಯಾ’ ಎಂಬ ಹೆಗ್ಗಳಿಕೆ ಲಭಿಸಿದೆ. ಆರೋಗ್ಯ ಕ್ಷೇತ್ರಕ್ಕೆ ನೀಡಿದ ವಿಶಿಷ್ಟ ಕೊಡುಗೆಯನ್ನು ಪರಿಗಣಿಸಿ ಭಾರತ ಸರ್ಕಾರವು 2023ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News