×
Ad

ಭಟ್ಕಳ : ಪತಿಯಿಂದ ಪತ್ನಿಯ ಕೊಲೆ

Update: 2023-10-17 23:56 IST

ಭಟ್ಕಳ : ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಪತಿಯೊರ್ವ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ತಾಲೂಕಿನ ಮುರ್ಡೇಶ್ವರ ಠಾಣೆಯ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.

ಭಟ್ಕಳ ತಾಲೂಕಿನ ಮುರ್ಡೇಶ್ವರ ನಿವಾಸಿ ನಂದಿನಿ ಲೋಕೇಶ ನಾಯ್ಕ(30) ಮೃತ ಮಹಿಳೆ. ಮೃತಳಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ.

ಶಿಲ್ಪಿ ಕೆಲಸ ಮಾಡುತ್ತಿದ್ದ ಲೋಕೇಶ ನಾಯ್ಕ ಮುರ್ಡೇಶ್ವರದ ನಾಡವರ ಕೇರಿ ನಿವಾಸಿ. ಕಳೆದ 3 ದಿನದಿಂದ ಸಬ್ಬತ್ತಿ ಕ್ರಾಸ್ ನಲ್ಲಿರುವ ಮನೆಯೊಂದರಲ್ಲಿ ತನ್ನ ಪತ್ನಿ ಮತ್ತು ಮಕ್ಕಳೊಂದಿಗೆ ವಾಸಿಸುತ್ತಿದ್ದ. ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಪತ್ನಿಯ ಕುತ್ತಿಗೆ ಸೀಳಿ ಕೊಲೆ ಮಾಡಿ ಪರಾರಿಯಾಗಿದ್ದ. ಮನೆಯವರು ನೋಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸ್ ಸಿಪಿಐ ಸಂತೋಷ ಕಾಯ್ಕಿಣಿ ಮತ್ತು ಅವರ ತಂಡ ಆರೋಪಿ ಲೋಕೇಶ ನಾಯ್ಕನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News