×
Ad

ಭಟ್ಕಳ: ಅಂಜುಮನ್ ವಿದ್ಯಾಸಂಸ್ಥೆಯಲ್ಲಿ ಪದವಿ ಪ್ರದಾನ ಸಮಾರಂಭ

Update: 2023-12-25 20:20 IST

ಭಟ್ಕಳ: ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ (ಎಐಟಿಎಂ), ಭಟ್ಕಳದಲ್ಲಿ ಮಾಸ್ಟರ್ ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್ (ಎಂಬಿಎ) ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ಶನಿವಾರ ನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಅಂಜುಮನ್ ಸಂಸ್ಥೆಯ ಉಪಾಧ್ಯಕ್ಷ ಸೈಯದ್ ಸಮೀರ್ ಸಕ್ಕಾಫ್ ಎಸ್.ಎಂ ಅವರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಾಲೇಜು ನೀಡಿದ ಕೊಡುಗೆಗೆ ಕೃತಜ್ಞತೆ ಸಲ್ಲಿಸಿದರು.

ಎಐಟಿಎಂನ ರಿಜಿಸ್ಟ್ರಾರ್ ಜಾಹಿದ್ ಖರೂರಿ ಪದವೀಧರರಿಗೆ ಪ್ರತಿಜ್ಞೆ ಬೋಧಿಸಿ, ಅವರು ಸಂಸ್ಥೆಯಲ್ಲಿ ಅಳವಡಿಸಿರುವ ಮೌಲ್ಯಗಳನ್ನು ಎತ್ತಿಹಿಡಿಯುವ ಭರವಸೆ ನೀಡಿದರು.

ವಿದ್ಯಾರ್ಥಿಗಳು ತಮ್ಮ ಪದವಿ ಪ್ರಮಾಣ ಪತ್ರ ಮತ್ತು ಸ್ಮರಣಿಕೆಗಳನ್ನು ಅತಿಥಿಗಳಿಂದ ಸ್ವೀಕರಿಸಿದರು. ಪ್ರಥಮ ಮತ್ತು ದ್ವಿತೀಯ ವರ್ಷದ ಟಾಪರ್‌ಗಳಿಗೆ ನಗದು ಬಹುಮಾನ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಆಡಳಿತ ಮಂಡಳಿ ಕಾರ್ಯದರ್ಶಿ ಮೊಹಿದ್ದೀನ್ ರುಕ್ನುದ್ದೀನ್ ವಹಿಸಿದ್ದರು. ಸಮಾರಂಭದಲ್ಲಿ ಅಂಜುಮನ್ ಕಾರ್ಯಕಾರಿಣಿ ಸದಸ್ಯ ಯಾಸೀನ್ ಅಸ್ಕೇರಿ, ಪ್ರಾಚಾರ್ಯ ಡಾ.ಕೆ.ಫಝಲುರ್ ರಹ್ಮಾನ್, ಡಾ.ಅನಂತಮೂರ್ತಿ ಶಾಸ್ತ್ರಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News