×
Ad

ಕಾಂಗ್ರೆಸ್‌ ಸೇರಿದ ಇನಾಯತುಲ್ಲಾ ಶಾಬಂದ್ರಿ

Update: 2024-05-03 19:59 IST

ಭಟ್ಕಳ : ಜೆ.ಡಿ.ಎಸ್. ಮುಖಂಡ ಹಾಗೂ ಭಟ್ಕಳದ ತಂಝೀಮ್ ಸಂಸ್ಥೆಯ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಜೆ.ಡಿ.ಎಸ್ ಪಕ್ಷ ತ್ಯಜಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.

ಪಕ್ಷಕ್ಕೆ ಬರಮಾಡಿಕೊಂಡ ಉಪಮುಖ್ಯಮಂತ್ರಿ ಡಿಕೆಶಿ ಕಾಂಗ್ರೆಸ್ ಪಕ್ಷದ ಶಾಲು ಹಾಕಿ ಸ್ವಾಗತಿಸಿದರು.

ಎಚ್ಡಿ ದೇವೇಗೌಡ ಹಾಗೂ ಕುಮಾರ ಸ್ವಾಮಿಯವರ ಅಭಿಮಾನಿಯಾಗಿದ್ದ ಇನಾಯತುಲ್ಲಾ ಶಾಬಂದ್ರಿ ರಾಜಕೀಯ ಆರಂಭಿಸಿದ್ದು ಜೆ.ಡಿ.ಎಸ್ ಪಕ್ಷದಿಂದ. ಭಟ್ಕಳದ ಇನಾಯತುಲ್ಲಾ ಶಾಬಂದ್ರಿ ಕಾಂಗ್ರೆಸ್ ಸೇರಿದ್ದರಿಂದ ಕಾಂಗ್ರೆಸ್ ಪಕ್ಷದಲ್ಲಿ ಬಲ ಬಂದಿದೆ ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News