×
Ad

ಮುರುಡೇಶ್ವರ: ಸಮುದ್ರದಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು

Update: 2024-05-05 19:30 IST

ಭಟ್ಕಳ: ಮುರ್ಡೇಶ್ವರ ಸಮುದ್ರದಲ್ಲಿ ಮುಳುಗಿ ಇಬ್ಬರು ಯುವಕರು ಮೃತಪಟ್ಟ ಘಟನೆ ರವಿವಾರ ಸಂಜೆ 5 ಗಂಟೆಯ ಸುಮಾರಿಗೆ ನಡೆದಿದೆ.

ಮೃತರನ್ನು ಮೌಲ್ವಿ ಇಸ್ಮಾಯಿಲ್ ಬರ್ಮಾವರ್ (22) ಎಂದು ಗುರುತಿಸಲಾಗಿದ್ದು, ಇನ್ನೊಬ್ಬ ಯುವಕನ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕರು ಸಮುದ್ರದಲ್ಲಿ ಈಜಲು ತೆರಳಿದ್ದು, ಎತ್ತರದ ಅಲೆಗಳ ರಭಸಕ್ಕೆ ಅವರು ಸಮುದ್ರದಲ್ಲಿ ಸಿಕ್ಕಿ ಹಾಕಿಕೊಂಡಿದ್ದರು ಎನ್ನಲಾಗಿದ್ದು, ದೋಣಿಯ ಸಹಾಯದಿಂದ ಇಬ್ಬರನ್ನು ದಡಕ್ಕೆ ಕರೆ ತಂದು ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಇಬ್ಬರೂ ಮೃತಪಟ್ಟರು ಎಂದು ತಿಳಿದುಬಂದಿದೆ.

ಈ ಬಗ್ಗೆ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.





 


 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News