×
Ad

ಭಟ್ಕಳ: ಅನುಮಾನಾಸ್ಪದವಾಗಿ ಮಹಿಳೆ ಮೃತ್ಯು; ಪ್ರಕರಣ ದಾಖಲು

Update: 2024-06-26 17:05 IST

ಭಟ್ಕಳ: ಕಾಲು ನೋವಿಗೆ ಇಲ್ಲಿನ ಖಾಸಗಿ ಕ್ಲಿನಿಕ್‌ವೊಂದರಲ್ಲಿ ಚಿಕಿತ್ಸೆ ಪಡೆದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿ ದ್ದಾರೆ ಎಂದು ಆರೋಪಿಸಿ ಮಹಿಳೆಯ ಕುಟುಂಬದ ಸದಸ್ಯರು ಪೊಲೀಸರಿಗೆ ದೂರು ನೀಡಿರುವ ಘಟನೆ ನಡೆದಿದೆ.

ಮೃತ ಮಹಿಳೆಯನ್ನು ಮುರುಡೇಶ್ವರ ಗರಡಿಗದ್ದೆಯ ನಿವಾಸಿ ಸಾವಿತ್ರಿ ಗೋವಿಂದ ನಾಯ್ಕ (57) ಎಂದು ಗುರುತಿಸಲಾಗಿದೆ.

ಈಕೆ ಕಾಲು ನೋವಿಗೆ ಸಂಬಂಧಿಸಿದಂತೆ ಚಿಕಿತ್ಸೆ ಪಡೆದಿದ್ದರು ಎಂದು ಹೇಳಲಾಗುತ್ತಿದ್ದು, ಇದೀಗ ಕಾಲಿನಲ್ಲಿ ಸಣ್ಣ ಗಾಯವೊಂದು ಕಾಣಿಸಿಕೊಂಡು ನೋವು ಉಲ್ಬಣಿಸಿದ ಹಿನ್ನೆಲೆಯಲ್ಲಿ ಮತ್ತೆ ಚಿಕಿತ್ಸೆ ಪಡೆಯಲು ಅದೇ ಕ್ಲಿನಿಕ್‌ಗೆ ಬಂದಿದ್ದರು. ಕಾಲಿನ ಗಾಯಕ್ಕೆ ಚುಚ್ಚುಮದ್ದು ನೀಡಿದ ನಂತರ ಮಹಿಳೆ ಅಸ್ವಸ್ಥ ಗೊಂಡಂತೆ ಕಂಡು ಬಂದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಸಮೀಪದ ಆಸ್ಪತ್ರೆ ಕರೆದೊಯ್ಯುವ ವೇಳೆ ಮಹಿಳೆ ಮೃತರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಹಿಳೆ ಸಾವಿನ ಬಗ್ಗೆ ಅನುಮಾನ ಮೂಡಿದ ಹಿನ್ನೆಲೆಯಲ್ಲಿ ಮೃತ ಮಹಿಳೆಯ ಮಗ ಶಂಕರ ನಾಯ್ಕ ಮುರುಡೇಶ್ವರ ಪೊಲೀಸರು ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣವನ್ನು ದಾಖಲಿಸಿ ಕೊಂಡ ಮುರುಡೇಶ್ವರ ಠಾಣಾ ಎಸ್‌ಐ ಮಂಜುನಾಥ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News