×
Ad

ಹನೀಫಾಬಾದ್ ನಲ್ಲಿ ಜಲಾವೃತಗೊಂಡ ಮನೆ; ಪಂಚಾಯತ್ ಅಧಿಕಾರಿಯಿಂದ ಸ್ಥಳ ಪರಿಶೀಲನೆ

Update: 2024-07-08 22:54 IST

ಭಟ್ಕಳ: ಇಲ್ಲಿನ ಹೆಬಳೆ ಗ್ರಾಮಪಂಚಾಯತ್ ವ್ಯಾಪ್ತಿಯ ಹನೀಫಾಬಾದ್ ಪ್ರದೇಶದಲ್ಲಿ ಇಬ್ರಾಹೀಮ್ ಖಲೀಲ್ ಎಂಬವರಿಗೆ ಸೇರಿದ ಮನೆ ಸಂಪೂರ್ಣವಾಗಿ ಜಲಾವೃತಗೊಂಡಿದ್ದು ಈ ಕುರಿತು ತನಗಾದ ನಷ್ಟವನ್ನು ತುಂಬಿಕೊಡುವಂತೆ ಕೋರಿ ಪಂಚಾಯತ್ ಅಧಿಕಾರಿಗೆ ಮನವಿಯನ್ನು ಸಲ್ಲಿಸಿದ್ದಾರೆ.

ಕಳೆದ ಎರಡು ಮೂರು ದಿನಗಳಿಂದ ಮಳೆಯಿಂದಾಗಿ ಹನೀಫಾಬಾದ್ ನಲ್ಲಿರುವ ಮನೆಯಲ್ಲಿ ಮಳೆ ನೀರು ಪ್ರವಾಹದಂತೆ ಹರಿದು ಬರುತ್ತಿದ್ದು ಮನೆ ಕಂಪೌಂಡ್ ಒಳಗೆ ನುಗ್ಗಿ ಬಹಳಷ್ಟು ಅನಾಹುತವನ್ನುಂಟು ಮಾಡಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇವರ ಮನವಿಗೆ ಸ್ಪಂದಿಸಿದ ಹೆಬಳೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುನಾಥ್ ಗೊಂಡ ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಹಾಗೂ ಸಮಾಜ ಸೇವಕ ಇಕ್ಬಾಲ್ ಸಿಟಿ ಮೆಡಿಕಲ್ ಇದ್ದರು.








 


 


 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News