×
Ad

ಭಟ್ಕಳ: ಅಕ್ರಮ ಜಾನುವಾರು ಸಾಗಾಟ ಆರೋಪ; ಲಾರಿ ಸಹಿತ ಓರ್ವನ ಬಂಧನ

Update: 2025-03-10 21:37 IST

ಭಟ್ಕಳ: ಅಕ್ರಮ ಜಾನುವಾರು ಸಾಗಾಟವನ್ನು ತಡೆದು ನಾಲ್ಕು ಜಾನುವಾರುಗಳನ್ನು ವಶಕ್ಕೆ ಪಡೆದ ಭಟ್ಕಳ ಗ್ರಾಮೀಣ ಪೊಲೀಸರು, ಸೋಮವಾರ ಮತ್ತೊಂದು ಕಾರ್ಯಾಚರಣೆಯಲ್ಲಿ 13 ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ.

ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ಜಮೀಲ್ ಯೂಸುಫ್ ಶೇಖ್ (49) ಎಂಬಾತನನ್ನು ಬಂಧಿಸಿರುವ ಪೊಲೀಸರು, ಲಾರಿ ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ಮೂವರು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿರಾಲಿ ಚೆಕ್ ಪೋಸ್ಟ್ ಬಳಿ ತಡೆದ ಲಾರಿಯಲ್ಲಿ 9 ಎತ್ತು ಮತ್ತು 4 ಕೋಣಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದ್ದುದನ್ನು ಪತ್ತೆಹಚ್ಚಿದ ಪೊಲೀಸರು, ಯಾವುದೇ ದಾಖಲೆಗಳಿಲ್ಲದ ಕಾರಣ ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ, ಇವುಗಳನ್ನು ಮಹಾರಾಷ್ಟ್ರದ ಮಾಲೆಗಾಂವ್‌ನಿಂದ ಭಟ್ಕಳಕ್ಕೆ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

 ಡಿವೈಎಸ್ಪಿ ಮಹೇಶ ಕೆ. ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು. ಪಿಎಸೈ ರನ್ನ ಗೌಡ ಪಾಟೀಲ, ಭರ್ಮಪ್ಪ ಬೆಳಗಲಿ, ಎಎಸ್‌ಐ ಕೃಷ್ಣಾನಂದ ನಾಯ್ಕ, ಪಿಸಿ ಬಸವರಾಜ ಡಿ.ಕೆ., ಮೋಹನ ಕಬ್ಬೇರ, ವೀರಣ್ಣ ಬಳ್ಳಾರಿ, ಲೋಹಿತ್ ಕುಮಾರ ಎಂ.ಪಿ., ಅಂಬರೀಶ ಕುಂಬಾರಿ, ಕಿರಣ ತಿಳಗಂಜಿ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News