×
Ad

ಭಟ್ಕಳ: ವಿಕಲಚೇತನರಿಗೆ ಮತ್ತು ಹಿರಿಯ ನಾಗರಿಕರಿಗೆ ಉಚಿತ ಸಾಧನ ಸಲಕರಣೆ ವಿತರಣೆ

Update: 2025-05-17 18:51 IST

ಭಟ್ಕಳ : ಜಿಲ್ಲಾಡಳಿತ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಯೋಗದೊಂದಿಗೆ, ಭಟ್ಕಳದ ದಿ ನ್ಯೂ ಇಂಗ್ಲಿಷ್ ಸ್ಕೂಲ್‌ನ ಕಮಲಾವತಿ ಸಭಾಂಗಣದಲ್ಲಿ ಇಂದು ವಿಕಲಚೇತನರಿಗೆ ಮತ್ತು ಹಿರಿಯ ನಾಗರಿಕರಿಗೆ ಉಚಿತ ಸಾಧನ ಸಲಕರಣೆಗಳು ಮತ್ತು ತ್ರಿಚಕ್ರ ವಾಹನಗಳನ್ನು ವಿತರಿಸಲಾಯಿತು.

ಕಾರ್ಯಕ್ರಮವನ್ನು ಗಿಡಕ್ಕೆ ನೀರು ಎರೆಯುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರು ಚಾಲನೆ ನೀಡಿದರು. ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ಸಾಧನ ಸಲಕರಣೆಗಳನ್ನು ವಿತರಿಸಿದ ಸಚಿವರು, "ವಿಕಲಚೇತನರ ಬಗ್ಗೆ ಅನುಕಂಪ ತೋರುವ ಬದಲು, ಅವರನ್ನು ಸಬಲರನ್ನಾ ಗಿಸಲು ಸಮಾಜವು ಬೆಂಬಲ ನೀಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷಿ ಯೋಜನೆಗಳನ್ನು ಜನರಿಗೆ ತಲುಪಿಸುವುದು ಉತ್ತಮ ಸೇವಾಕಾರ್ಯವಾಗಿದೆ," ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಗ್ಯಾರಂಟಿ ಜಿಲ್ಲಾಧ್ಯಕ್ಷ ಸತೀಶ್ ನಾಯ್ಕ್, ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಈಶ್ವರ್ ಕಾಂದೂ, ಭಟ್ಕಳ ಸಹಾಯಕ ಆಯುಕ್ತೆ ಕಾವ್ಯರಾಣಿ, ಕುಮಟ ಸಹಾಯಕ ಆಯುಕ್ತ ಕನಿಷ್ಕ, ತಹಸೀಲ್ದಾರ್ ನಾಗೇಂದ್ರ ಕೊಳ ಶೆಟ್ಟಿ ಹಾಗೂ ಪುರಸಭೆ ಅಧ್ಯಕ್ಷ ಅಲ್ತಾಫ್ ಖರೂರಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News