×
Ad

ಭಟ್ಕಳದಲ್ಲಿ ನವಿಲು ಬೇಟೆ: ಆರೋಪಿ ಸೆರೆ

Update: 2023-08-29 18:52 IST

ಭಟ್ಕಳ: ರಾಷ್ಟ್ರಪಕ್ಷಿ ನವಿಲನ್ನು ಬೇಟೆಯಾಡಿ ಸಾಗಿಸುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಚರಣೆ ನಡೆಸಿ ಬಂಧಿಸಿರುವ ಘಟನೆ ತಾಲೂಕಿನ ಮುಟ್ಟಳ್ಳಿ ಗ್ರಾ.ಪಂ. ವ್ಯಾಪ್ತಿಯ ಬೇಹಳ್ಳಿ ಎಂಬಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಮುಗುಳಿ ಹೊಂಡ ನಿವಾಸಿ ಇನಾಯತುಲ್ಲಾ ಎಂದು ಗುರುತಿಸಲಾಗಿದೆ.

ಆತ ಮುಟ್ಟಳ್ಳಿ ಗ್ರಾ.ಪಂ ವ್ಯಾಪ್ತಿಯ ಬೇಹಳ್ಳಿಯ ಅರಣ್ಯ ಪ್ರದೇಶದಲ್ಲಿ ನವಿಲಿಗೆ ಗುಂಡು ಹಾರಿಸಿ ಬೈಕ್‌ ನಲ್ಲಿ ಸಾಗಿಸುತ್ತಿದ್ದಾಗ ಅರಣ್ಯ ಸಿಬ್ಬಂದಿ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ವನ್ಯಜೀವಿ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿ ನ್ಯಾಯಾಲಕ್ಕೆ ಹಾಜರುಪಡಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News