×
Ad

ಮುರುಡೇಶ್ವರ ಪೊಲೀಸ್ ಠಾಣೆಯ ಪಿ.ಎಸ್.ಐ ಮಂಜುನಾಥ್ ಅಮಾನತು

Update: 2024-09-03 18:57 IST

ಭಟ್ಕಳ: ಭಟ್ಕಳದ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಕರ್ತವ್ಯ ಲೋಪ ಎಸಗಿದ ಹಿನ್ನೆಯಲ್ಲಿ ಅಮಾನುತ್ತುಗೊಂಡಿರುವ ಬೆನ್ನ ಹಿಂದೆಯೇ ಮಂಗಳವಾರ ಮುರುಡೇಶ್ವರ ಪೊಲೀಸ್ ಠಾಣೆಯ ಪಿ.ಎಸ್.ಐ ಮಂಜುನಾಥ್ ಎಂಬುವರರನ್ನು ಕರ್ತವ್ಯ ಲೋಪ ಎಸೆಗಿದ್ದಾರೆ ಎಂದು ಆರೋಪಿಸಿ ಉ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಅವರು ಅಮಾನತುಗೊಳ್ಳಿಸಿ ಆದೇಶ ನೀಡಿದ್ದಾರೆ.

ಮುರುಡೇಶ್ವರದ ಲಾಡ್ಜ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ತಡೆಯುವಲ್ಲಿ ಮುರುಡೇಶ್ವರ ಠಾಣಾಧಿಕಾರಿ ಮಂಜುನಾಥ್ ವಿಫಲಗೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಧಂದೆ, ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದು ಇದನ್ನು ತಡೆಯುವಲ್ಲಿ ವಿಫಲಗೊಂಡಿದ್ದಾರೆ. ಕರ್ತವ್ಯ ಪಾಲನೆಯಲ್ಲಿ ಘೋರ ಅಶಿಸ್ತು, ದುರ್ನಡತೆ ಹಾಗೂ ಬೇಜವಾಬ್ದಾರಿತನ ತೋರಿಸಿದ್ದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ಬಾಕಿ ಇರಿಸಿ ತಕ್ಷಣ ಜಾರಿಗೆ ಬರುವಂತೆ ಕರ್ತವ್ಯದಿಂದ ಪಿ.ಎಸ್.ಐ ಮಂಜುನಾಥ್ ರನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ತಿಳಿಸಿದ್ದು, ಅಧೀನ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡದೇ ಮತ್ತು ಮೇಲ್ವಿಚಾರಣೆ ನಡೆಸದೆ ಗ್ರಾಮೀಣ ವೃತ್ತದ ಪ್ರಭಾರ ಹೊಂದಿರುವ ಗ್ರಾಮೀಣ ಠಾಣೆ ಪೊಲೀಸ್ ನಿರೀಕ್ಷಕರ ವಿರುದ್ಧವೂ ಶಿಸ್ತುಕ್ರಮ ಜರುಗಿಸಲು ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News