×
Ad

ಯಲ್ಲಾಪುರ| ಪೊಲೀಸರಿಂದ ಫೈರಿಂಗ್: ರೌಡಿಶೀಟರ್ ಪ್ರವೀಣ್ ಮನೋಹರ್ ಬಂಧನ

Update: 2025-07-14 23:36 IST

ಕಾರವಾರ: ಉ.ಕ. ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಅರಣ್ಯ ಪ್ರದೇಶದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ ರೌಡಿಶೀಟರ್ ಪ್ರವೀಣ್ ಮನೋಹರ್ ಸುಧೀರ್ (37) ಎಂಬಾತನನ್ನು ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಪ್ರವೀಣ್ ಕೊಲೆಯತ್ನ, ಸಾರ್ವಜನಿಕ ಆಸ್ತಿಗೆ ಹಾನಿ ಸೇರಿದಂತೆ 16 ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇಂದು ಸಂಜೆ ಯಲ್ಲಾಪುರ-ಹಳಿಯಾಳ ರಸ್ತೆಯ ಕಣ್ಣಿಗೇರಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕಳೆದ ಮೂರು ತಿಂಗಳಿಂದ ತಲೆಮರೆಸಿಕೊಂಡಿದ್ದ ಪ್ರವೀಣ್‌ನನ್ನು ಬಂಧಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾಗ, ಆತ ಕಲ್ಲು ಮತ್ತು ಚೂರಿ ಹಿಡಿದು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಪಿಎಸ್‌ಐ ಮಹಾಂತೇಶ್ ನಾಯ್ಕ, ಕಾನ್‌ಸ್ಟೆಬಲ್‌ಗಳಾದ ಮಲ್ಲಿಕಾರ್ಜುನ ಹೊಸಮನಿ, ಜಾಫರ್ ಅಥರಗುಂಜಿ ಮತ್ತು ಅಸ್ಲಾಂ ಅವರಿಗೆ ಗಾಯಗಳಾಗಿವೆ.


ಈ ವೇಳೆ ಪಿಎಸ್‌ಐ ಮಹಾಂತೇಶ್ ನಾಯ್ಕ ಅವರು ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ಆರೋಪಿ ತನ್ನ ದಾಳಿಯನ್ನು ಮುಂದುವರಿಸಿದ್ದರಿಂದ, ಪಿಎಸ್‌ಐ ಅನಿವಾರ್ಯವಾಗಿ ಪ್ರವೀಣ್‌ನ ಬಲಗಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡೇಟು ತಿಂದ ನಂತರ ಪ್ರವೀಣ್‌ನನ್ನು ಬಂಧಿಸಿ, ಯಲ್ಲಾಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News