×
Ad

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಕ್ರೀಡಾಕೂಟ: ಪ್ರಣವಿ ರಾಮಚಂದ್ರ ಕಿಣಿಗೆ ಚಿನ್ನ, ಬೆಳ್ಳಿಯ ಪದಕ

Update: 2025-08-11 21:08 IST

ಭಟ್ಕಳ: ಬೆಂಗಳೂರಿನ ಯಶವಂತಪುರದ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಆಯೋಜಿತವಾದ 5ನೇ ಕರ್ನಾಟಕ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಕ್ರೀಡಾಕೂಟದಲ್ಲಿ ಯುವ ಕ್ರೀಡಾಪಟು ಪ್ರಣವಿ ರಾಮಚಂದ್ರ ಕಿಣಿ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಗೆದ್ದು ಮಿಂಚಿದ್ದಾರೆ.

7 ರಿಂದ 9 ವರ್ಷದ ವಯೋಮಾನದ ಪಾಯಿಂಟ್ ಫೈಟ್ ವಿಭಾಗದಲ್ಲಿ ಪ್ರಣವಿ ಚಿನ್ನದ ಪದಕವನ್ನು ತಮ್ಮದಾಗಿಸಿ ಕೊಂಡರೆ, ಲೈಟ್ ಕಾಂಟ್ಯಾಕ್ಟ್ ವಿಭಾಗದಲ್ಲಿ ಬೆಳ್ಳಿಯ ಪದಕವನ್ನು ಗಳಿಸಿದ್ದಾರೆ. ಈ ಗೆಲುವಿನ ಮೂಲಕ ಪ್ರಣವಿ, ಚೆನ್ನೈನಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಪ್ರಣವಿಯ ಈ ಸಾಧನೆ ಕರ್ನಾಟಕದ ಕಿಕ್ ಬಾಕ್ಸಿಂಗ್ ಕ್ರೀಡಾಕ್ಷೇತ್ರದಲ್ಲಿ ಯುವ ಪ್ರತಿಭೆಗಳ ಸಾಮರ್ಥ್ಯವನ್ನು ಎತ್ತಿ ತೋರಿಸಿದೆ. ಈ ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸ್ಪರ್ಧಿಗಳು ಭಾಗವಹಿಸಿದ್ದು, ತೀವ್ರ ಪೈಪೋಟಿಯ ನಡುವೆಯೂ ಪ್ರಣವಿಯ ಪ್ರದರ್ಶನ ಗಮನ ಸೆಳೆದಿದೆ. ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯಕ್ಕೆ ಕೀರ್ತಿ ತರುವ ಗುರಿಯೊಂದಿಗೆ ಪ್ರಣವಿ ತಯಾರಿ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News