×
Ad

ಮಹಿಳೆಯ ಬ್ಲ್ಯಾಕ್ ಮೇಲ್: ಆರೋಪಿ ಪ್ರಶಾಂತ್ ಭಟ್ ವಿರುದ್ಧ ದೂರು

Update: 2023-09-30 10:46 IST

ಕಾರವಾರ, ಸೆ.29: ಶಿರಸಿ ಮೂಲದ ಮಹಿಳೆಯನ್ನು ಲೈಂಗಿಕವಾಗಿ ಬಳಸಿ, ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡುವುದಾಗಿ ಬೆದರಿಸಿ ಹಣ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡಿದ ಆರೋಪದಲ್ಲಿ ದಕ್ಷಿಣ ಕನ್ನಡ ಮೂಲದ ವ್ಯಕ್ತಿಯೊಬ್ಬರ ವಿರುದ್ಧ ಸಂತ್ರಸ್ತೆ ಮಹಿಳೆ ದೂರು ನೀಡಿದ್ದಾರೆ.

ದ.ಕ. ಜಿಲ್ಲೆಯ ಪುತ್ತೂರಿನ ಆರ್ಲಪದವು ಮೂಲದ ಪ್ರಶಾಂತ್ ಭಟ್ ಮಾಣಿಲ ಆರೋಪಿ.

'ನನಗೆ ಸಂಗೀತದಲ್ಲಿ ಆಸಕ್ತಿ ಇದ್ದು, ಕ್ಲಬ್ ಹೌಸ್ ಆ್ಯಪ್ನಲ್ಲಿ ಹಾಡುತ್ತಿದ್ದೆ. 2020ರಲ್ಲಿ ಆ್ಯಪ್ ಮೂಲಕವೇ ಆರೋಪಿ ಪ್ರಶಾಂತ ಭಟ್ ಪರಿಚಯವಾಗಿದೆ. ಪರಿಚಯ ಸ್ನೇಹಕ್ಕೆ ತಿರುಗಿ ಕ್ರಮೇಣ ಪರಸ್ಪರ ಇಷ್ಟ ಪಟ್ಟಿದ್ದೆವು. 2023ರ ಜನವರಿಯಲ್ಲಿ ಆರೋಪಿಯು ನನ್ನನ್ನು ಭೇಟಿಯಾಗಲು ಬಂದು ಶಿರಸಿಯ ಖಾಸಗಿ ಲಾಡ್ಜ್ ವೊಂದರಲ್ಲಿ ರೂಮ್ ಮಾಡಿದ್ದು, ಅಲ್ಲಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಅಲ್ಲದೆ, ಅದೇ ಲಾಡ್ಜ್ ನಲ್ಲಿ ಘಟನೆಯು ಮತ್ತೊಮ್ಮೆ ನಡೆದಿದೆ.

ಈ ವೇಳೆ ಆರೋಪಿಯು ನನ್ನ ಖಾಸಗಿ ಕ್ಷಣಗಳ ಫೋಟೊ ಕ್ಲಿಕ್ಕಿಸಿಕೊಂಡಿದ್ದಾನೆ. ಜೊತೆಗೆ ವೀಡಿಯೊ ಕಾಲ್ ಮಾಡಿ ಅಲ್ಲಿಯೂ ನಗ್ನ ದೃಶ್ಯಗಳನ್ನು ಸೆರೆ ಹಿಡಿದಿದ್ದು, ಹಣಕ್ಕೂ ಬೇಡಿಕೆ ಇಟ್ಟಿದ್ದ. ಈ ವೇಳೆ ನಾನು 25 ಸಾವಿರ ರೂ. ನೀಡಿದ್ದೆ. ಬಳಿಕ ಆರೋಪಿಯು ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡುವುದಾಗಿ ಬೆದರಿಕೆ ನೀಡಿ 7 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾನೆ. ಅಲ್ಲದೆ, ಖಾಸಗಿ ಚಿತ್ರಗಳನ್ನು ನನ್ನ ತಾಯಿ ಹಾಗು ಸ್ನೇಹಿತರಿಗೂ ಕಳುಹಿಸಿದ್ದಾನೆ ಎಂದು ಸಂತ್ರಸ್ತೆ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಕಾರವಾರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News