ಹರಪನಹಳ್ಳಿ : ತಾಲೂಕಿನ ವಿವಿಧೆಡೆ ಹಗಲು ಹೊತ್ತಿನಲ್ಲಿಯೂ ಬೀದಿ ದೀಪಗಳು ಉರಿಯುತ್ತಿದ್ದು, ಇದರಿಂದ ವಿದ್ಯುತ್ ವ್ಯರ್ಥವಾಗುತ್ತಿರುವ ಸಮಸ್ಯೆ ಕುರಿತು ನ.5ರಂದು ವಾರ್ತಾ ಭಾರತಿ ಪತ್ರಿಕೆಯಲ್ಲಿ ಪ್ರಕಟವಾದ ‘ಹಗಲಲ್ಲೂ ಉರಿಯುವ ಬೀದಿ ದೀಪಗಳು, ವಿದ್ಯುತ್ ವ್ಯರ್ಥಕ್ಕೆ ಕಡಿವಾಣ ಎಂದು?’ ಎಂಬ ಶೀರ್ಷಿಕೆಯ ವರದಿಗೆ ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ.ವೈಷ್ಣವಿ ಸ್ಪಂದಿಸಿದ್ದಾರೆ. ಸಮಸ್ಯೆ ಪರಿಹಾರಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಾರ್ತಾ ಭಾರತಿಯಲ್ಲಿ ಪ್ರಕಟವಾದ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿ, ಈ ಸಮಸ್ಯೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಹಗಲು ಹೊತ್ತಿನಲ್ಲಿಯೂ ಬೀದಿ ದೀಪಗಳು ಉರಿಯುವುದರಿಂದ ಅನಗತ್ಯವಾಗಿ ವಿದ್ಯುತ್ ವ್ಯರ್ಥವಾಗುತ್ತಿದ್ದು, ಸಾರ್ವಜನಿಕ ಹಣಕ್ಕೂ ಹೊರೆಯಾಗುತ್ತಿದೆ ಎಂಬ ಅಂಶವನ್ನು ವರದಿಯಲ್ಲಿ ಗಮನಕ್ಕೆ ತರಲಾಗಿತ್ತು. ಇದೀಗ ಪತ್ರಿಕಾ ವರದಿಗೆ ಸರ್ಕಾರದ ಮಟ್ಟದಲ್ಲಿ ಸ್ಪಂದನೆ ದೊರೆತಿದೆ.

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ

ವಿಜಯನಗರ ಜಿಲ್ಲಾ ವರದಿಗಾರರು

ಮಹಮ್ಮದ್ ಗೌಸ್ ಅವರು ಕಳೆದ ಆರು ವರ್ಷಗಳಿಂದ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿವಿಧ ಮಾಧ್ಯಮ ಚಟುವಟಿಕೆಗಳಲ್ಲಿ ಅನುಭವ ಹೊಂದಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ವಿಜಯನಗರ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ